ಜಯನಗರದಲ್ಲಿ ಸೋಲಿಗೆ ಸ್ಥಳೀಯ ಕಾರ್ಪೋರೇಟರ್ ಹೊಣೆ: ಬಿಜೆಪಿಯಿಂದ ಶೋಕಾಸ್ ನೋಟಿಸ್
ಜಯನಗರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ 3 ಸಾವಿರ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸೋತಿರುವುದಕ್ಕೆ ಬಿಜೆಪಿ ನಾಯಕರು ...

Published On :
ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ 3 ಸಾವಿರ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸೋತಿರುವುದಕ್ಕೆ ಬಿಜೆಪಿ ನಾಯಕರು ಆಕ್ರೋಶಗೊಂಡಿದ್ದಾರೆ.
ಸ್ಥಳೀಯ ಬಿಜೆಪಿ ಕಾರ್ಪೋರೇಟರ್ ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡಿರುವುದರಿಂದ ಪ್ರಹ್ಲಾದ್ ಬಾಬು ಸೋತಿದ್ದಾರೆ ಎಂದು ಕಿಡಿಕಾರಿದೆ. ಈ ಸಂಬಂಧ ಬೆಂಗಳೂರು ನಗರ ಘಟಕ ಅಧ್ಯಕ್ಷ ಪಿ.ಎನ್ ಸದಾಶಿವ ಶುಕ್ರವಾರ ಬೈರಸಂದ್ರ ಕಾರ್ಪೋರೇಟರ್ ಎನ್ ನಾಗರಾಜ್ ಅವರಿಗೆ ಶೋಕಾಸ್ ನೋಟೀಸ್ ನೀಡಿದ್ದಾರೆ.
7 ದಿನಗಳಲ್ಲಿ ವಿವರಣೆ ನೀಡುವಂತೆ ನೋಟೀಸ್ ನಲ್ಲಿ ತಿಳಿಸಿದ್ದು, ಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದವರ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂದು ಪ್ರಶ್ನಿಸಿದ್ದಾರೆ,
ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಪರ ಪ್ರಚಾರ ಮಾಡದೇ ಕಾಂಗ್ರೆಸ್ ನ ಸೌಮ್ಯಾ ರೆಡ್ಡಿ ಪರ ಕೆಲಸ ಮಾಡಿದ್ದಾರೆಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ 2,889 ಮತಗಳ ಅಂತರದಿಂದ ಜಯ ಗಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿcorporatorಶೋಕಾಸ್ ನೋಟಿಸ್ಕಾರ್ಪೋರೇಟರ್showcause noticeಬಿಜಯನಗರ ವಿಧಾನಸಭೆ ಕ್ಷೇತ್ರB N PrahladJayanagar assemblyಎನ್ ಪ್ರಹ್ಲಾದ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


