ರಾಜಕೀಯ

ಲೋಕಸಭೆ ಚುನಾವಣೆವರೆಗೆ ಯಾರೂ ನನ್ನನ್ನು ಟಚ್‌ ಮಾಡಲ್ಲ: ಸಿಎಂ ಕುಮಾರಸ್ವಾಮಿ

ಐದು ವರ್ಷಗಳ ಕಾಲ ನಾನೇ ಸಿಎಂ ಎನ್ನುತ್ತಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ನೀಡಿದ....

ಲೋಕಸಭೆ ಚುನಾವಣೆವರೆಗೆ ಯಾರೂ ನನ್ನನ್ನು ಟಚ್‌ ಮಾಡಲ್ಲ: ಸಿಎಂ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
Published On :
ಬೆಂಗಳೂರು: ಐದು ವರ್ಷಗಳ ಕಾಲ ನಾನೇ ಸಿಎಂ ಎನ್ನುತ್ತಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ನೀಡಿದ ಹೇಳಿಕೆ ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಆಯಸ್ಸಿನ ಬಗ್ಗೆ ಪ್ರಶ್ನೆ ಹುಟ್ಟು ಹಾಕಿದೆ. 
ಇಂದು ಲೆಕ್ಕಪರಿಶೋಧಕರ 15ನೇ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಇನ್ನು ಒಂದು ವರ್ಷದ ವರೆಗೆ ನನ್ನನ್ನು ಯಾರು ಟಚ್ ಮಾಡುವುದಿಲ್ಲ. ಲೋಕಸಭಾ ಚುನಾವಣೆ ವರೆಗೆ ಇದೇ ಸರ್ಕಾರ ಇರುತ್ತದೆ ಎನ್ನುವ ಭರವಸೆ ಇದೆ ಎಂದರು.
ನಾನು ಒಂದು ಕ್ಷಣವೂ ವರ್ಥ್ಯ ಮಾಡದೇ ಪ್ರತಿ ಕ್ಷಣವೂ ಅಭಿವೃದ್ಧಿಯ ಬಗ್ಗೆ ಯೋಚಿಸುತ್ತಿದ್ದೇನೆ. ನನ್ನ ಎಲ್ಲಾ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತೇನೆ. ಯಾವುದರಿಂದಲೂ ಜಾರಿಕೊಳ್ಳುವುದಿಲ್ಲ. ಆರ್ಥಿಕ ಶಿಸ್ತಿನ ಅಡಿಯೊಳಗೆ ರೈತ ಸಾಲ ಮನ್ನಾ ಮಾಡುವೆ. ಈಗಾಗಲೇ ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದರು.
ಮಾಧ್ಯಮ ವಾಹಿನಿಗಳು ರಾಜಕೀಯ ಚರ್ಚೆ ಮಾಡುವುದನ್ನು ನಿಲ್ಲಿಸಿ, ಸಮಸ್ಯೆಗಳ ಬಗ್ಗೆ ಮಾತನಾಡಿ ಎಂದರು.
ಇದೇ ವೇಳೆ, ತಾವು ಜುಲೈ ಮೊದಲ ವಾರದಲ್ಲಿ ರಾಜ್ಯದ ಬಜೆಟ್ ಮಂಡನೆ ಮಾಡುವುದಾಗಿ ಸಿಎಂ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.