ರಾಜಕೀಯ

ಸಿಎಂ ಕುಮಾರಸ್ವಾಮಿ ಭೇಟಿ ಮಾಡಿದ ಸತೀಶ್ ಜಾರಕಿಹೊಳಿ

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡುವ ಕಾಂಗ್ರೆಸ್ ನ ಭಿನ್ನಮತೀಯ ...

ಸಿಎಂ ಕುಮಾರಸ್ವಾಮಿ ಭೇಟಿ ಮಾಡಿದ ಸತೀಶ್ ಜಾರಕಿಹೊಳಿ
ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ
Published On :

ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡುವ ಕಾಂಗ್ರೆಸ್ ನ ಭಿನ್ನಮತೀಯ ಶಾಸಕರ ಸಂಖ್ಯೆ ಹೆಚ್ಚಾಗುತ್ತಿದೆ. ಕಾಂಗ್ರೆಸ್ ಶಾಸಕ ಸಿ ಎಸ್ ಶಿವಳ್ಳಿ ಭೇಟಿ ಮಾಡಿದ ನಂತರ ನಿನ್ನೆ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.

ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದುದಕ್ಕೆ ಸತೀಶ್ ಜಾರಕಿಹೊಳಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದವು.

ನಿನ್ನೆ ಮುಖ್ಯಮಂತ್ರಿ ನಿವಾಸಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಬೆಳಗಾವಿ ಜಿಲ್ಲೆಯ ಅಭಿವೃದ್ಧಿ ವಿಷಯಗಳ ಕುರಿತು ಚರ್ಚೆ ನಡೆಸಲು ನಾನು ಬಂದೆ. ನಾನು ಜನರ ಪ್ರತಿನಿಧಿಯಾಗಿದ್ದು ಅವರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ. ಕಾಂಗ್ರೆಸ್ ಬಲವರ್ಧನೆಗೆ ನಾನು ಕೆಲಸ ಮುಂದುವರಿಸಲಿದ್ದೇನೆ ಎಂದು ಹೇಳಿದರು.

ತಮಗೆ ಸಚಿವರಾಗುವ ಆಕಾಂಕ್ಷೆಯನ್ನು ಮುಖ್ಯಮಂತ್ರಿ ಬಳಿ ಹೇಳಿಕೊಂಡಿಲ್ಲ. ತಮ್ಮ ಬೆಂಬಲಿಗರನ್ನು ಮುಂದೆ ತರುವುದು ಉದ್ದೇಶವಾಗಿದೆ. ನಾನು ಇನ್ನೂ ಕೂಡ ಸಚಿವನಾಗಬಹುದು ಎಂಬ ಆಶಾವಾದದಲ್ಲಿದ್ದೇನೆ. ಇನ್ನೂ ಎರಡು ವರ್ಷ ಕಾಯುತ್ತೇನೆ. ನಮ್ಮ ಶಾಸಕರನ್ನು ಸಚಿವಾಲಯಕ್ಕೆ ಸೇರಿಸಿಕೊಳ್ಳುವ ವಿಶ್ವಾಸವಿದ್ದು ನಿಗಮ ಮಂಡಳಿಗಳಲ್ಲಿಯೂ ಸ್ಥಾನ ಸಿಗುವ ವಿಶ್ವಾಸವಿದೆ ಎಂದರು. ಸಿದ್ದರಾಮಯ್ಯ ನೇತೃತ್ವದ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಮೊದಲಿಗೆ ನಿಗಮ ಮಂಡಳಿಗೆ ನೇಮಕ ಮಾಡಲು ನಿರ್ಧರಿಸಿದ್ದು ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲು ತೀರ್ಮಾನಿಸಿದೆ ಎಂದರು.

ಸತೀಶ್ ಜಾರಕಿಹೊಳಿ ಅವರ ಭೇಟಿ ಮತ್ತೊಮ್ಮೆ ಭಿನ್ನಮತೀಯ ಕಾಂಗ್ರೆಸ್ ಶಾಸಕರ ಮನವೊಲಿಸುವಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಮುಖ್ಯ ಪಾತ್ರ ವಹಿಸುತ್ತಿದ್ದಾರೆ ಎಂಬ ಮಾತಿಗೆ ಪುಷ್ಠಿ ನೀಡುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.