ರಾಜಕೀಯ

ಧರ್ಮಸ್ಥಳ: ಕುತೂಹಲ ಮೂಡಿಸಿದ ಸಿದ್ದರಾಮಯ್ಯ- ಎಚ್.ಡಿ ರೇವಣ್ಣ ಭೇಟಿ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಲೋಕೋಪಯೋಗಿ ಸಚಿವ ...

ಧರ್ಮಸ್ಥಳ: ಕುತೂಹಲ ಮೂಡಿಸಿದ ಸಿದ್ದರಾಮಯ್ಯ- ಎಚ್.ಡಿ ರೇವಣ್ಣ ಭೇಟಿ
ರೇವಣ್ಣ ಮತ್ತು ಸಿದ್ದರಾಮಯ್ಯ ಭೇಟಿ
Published On :
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಭೇಟಿ ಮಾಡಿದರು.
ಭೇಟಿ ವೇಳೆ ಕೆಲಹೊತ್ತು ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಅಪರೂಪದ ಬೆಳವಣಿಗೆ ರಾಜಕೀಯ ವಲಯದಲ್ಲಿ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಮಳೆಹಾನಿ ಮತ್ತು ಪ್ರಗತಿ ಪರಿಶೀಲನಾ ಸಭೆ ನಡೆಸುವ ಸಲುವಾಗಿ ರೇವಣ್ಣ ಅವರು ಮಂಗಳೂರಿಗೆ ಭೇಟಿ ನೀಡಿದ್ದರು. ಈ ವೇಳೆ ಉಜಿರೆಗೆ ತೆರಳಿದ ಅವರು ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಸಚಿವ ಸ್ಥಾನ ವಿಚಾರದಲ್ಲಿ ರೇವಣ್ಣ ಹಾಗೂ ಸಿದ್ದರಾಮಯ್ಯ ಮಧ್ಯೆ ಅಸಮಾಧಾನ ಸೃಷ್ಟಿಯಾಗಿತ್ತು. ಹೀಗೆ ಭಿನ್ನಾಭಿಪ್ರಾಯ ಬಂದ ಮೇಲೆ ದೂರವೇ ಉಳಿದಿದ್ದ ಎಚ್ ಡಿ ರೇವಣ್ಣ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. 
ಇನ್ನು ಭೇಟಿ ನಂತರ ಮಾಧ್ಯಮದರೊಂದಿಗೆ ಮಾತನಾಡಿದ ರೇವಣ್ಣ, ಯಾವ ರಾಜಕೀಯ ಉದ್ದೇಶದಿಂದಲೂ ಭೇಟಿಯಾಗಿಲ್ಲ, ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ ಎಂದು ಹೇಳಿದ ಅವರು, ಸಿಎಂ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.