ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ: ಕುಮಾರಸ್ವಾಮಿ
ಇತ್ತೀಚಿಗಷ್ಟೇ ಕನಿಷ್ಠ ಲೋಕಸಭಾ ಚುನಾವಣೆವರೆಗೆ ನನ್ನನ್ನು ಯಾರು ಟಚ್ ಮಾಡುವುದಿಲ್ಲ ಎಂದಿದ್ದ...

Published On :
ಬೆಂಗಳೂರು: ಇತ್ತೀಚಿಗಷ್ಟೇ ಕನಿಷ್ಠ ಲೋಕಸಭಾ ಚುನಾವಣೆವರೆಗೆ ನನ್ನನ್ನು ಯಾರು ಟಚ್ ಮಾಡುವುದಿಲ್ಲ ಎಂದಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಈಗ ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ - ಜೆಡಿಎಸ್ ಸರ್ಕಾರ ಐದು ವರ್ಷಗಳ ಅವಧಿ ಪೂರ್ಣಗೊಳಿಸಲಿದೆ ಎಂಬ ವಿಶ್ವಾಸವಿದೆ ಮತ್ತು ಎಲ್ಲರ ಸಹಕಾರದೊಂದಿಗೆ ಸ್ಥಿರ ಸರ್ಕಾರ ನೀಡುತ್ತೇನೆ ಎಂದು ಸಿಎಂ ಮಾಧ್ಯಮಕ್ಕೆ ತಿಳಿಸಿದ್ದಾರೆ.
ತಮ್ಮನ್ನು ತಾವು ಸೇವಕ ಎಂದು ಕರೆದುಕೊಂಡ ಸಿಎಂ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನಗೆ ಮತ ನೀಡಿದ ಮತ್ತು ನೀಡದವರು ಸೇರಿದಂತೆ ಎಲ್ಲರ ಅಭಿವೃದ್ಧಿಗಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ.
ನಾನು ಈ ಹಿಂದೆ ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಯಿಸಲಾಗಿದೆ. ಮುಂದಿನ ಐದು ವರ್ಷಗಳ ಕಾಲ ನಾನೇ ರಾಜ್ಯದ ಮುಖ್ಯಮಂತ್ರಿಯಾಗಿರುತ್ತೇನೆ ಎಂದರು.
ಕಳೆದ ಶುಕ್ರವಾರ, ಇನ್ನು ಒಂದು ವರ್ಷದ ವರೆಗೆ ನನ್ನನ್ನು ಯಾರು ಟಚ್ ಮಾಡುವುದಿಲ್ಲ. ಲೋಕಸಭಾ ಚುನಾವಣೆ ವರೆಗೆ ಇದೇ ಸರ್ಕಾರ ಇರುತ್ತದೆ ಎನ್ನುವ ಭರವಸೆ ಇದೆ ಎಂದು ಹೇಳುವ ಮೂಲಕ ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಆಯಸ್ಸಿನ ಬಗ್ಗೆ ಪ್ರಶ್ನೆ ಹುಟ್ಟು ಹಾಕಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


