ಪ್ರಜ್ವಲ್ ರೇವಣ್ಣಗೆ ಹಾಸನ ಬಿಟ್ಟುಕೊಟ್ಟು ಮಂಡ್ಯ ಲೋಕಸಭೆ ಕ್ಷೇತ್ರದಿಂದ ದೇವೇಗೌಡ ಸ್ಪರ್ಧೆ!
ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಹೆಚ್.ಡಿ. ದೇವೇಗೌಡರು ಸ್ಪರ್ಧಿಸಲಿದ್ದಾರೆಂಬ ಸುದ್ದಿ ಕೇಳಿಬಂದಿದೆ. ...

Published On :
ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಹೆಚ್.ಡಿ. ದೇವೇಗೌಡರು ಸ್ಪರ್ಧಿಸಲಿದ್ದಾರೆಂಬ ಸುದ್ದಿ ಕೇಳಿಬಂದಿದೆ.
ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಮ ಅವರಿಗೆ ಬಿಟ್ಟುಕೊಟ್ಟು ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯದಿಂದ ಸ್ಪರ್ಧಿಸಲು ದೇವೇಗೌಡರು ಚಿಂತಿಸಿದ್ದಾರೆ ಎನ್ನಲಾಗಿದೆ, ದೇವೇಗೌಡರು ಮಂಡ್ಯದಿಂದ ಸ್ಪರ್ಧಿಸಬೇಕೆಂದು ಹಲವು ಶಾಸಕರು ಒತ್ತಾಯಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಮಂಡ್ಯ ಜಿಲ್ಲೆಯು ಜೆಡಿಎಸ್ನ ಭದ್ರಕೋಟೆಯಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಈ ಕ್ಷೇತ್ರವನ್ನು ಬಿಟ್ಟುಕೊಡಲು ಸಾಧ್ಯವೇ ಇಲ್ಲ. ದೇವೇಗೌಡರೇ ಈ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬುದು ಎಲ್ಲಾ ಜೆಡಿಎಸ್ ನಾಯಕರ ಆಸೆಯಾಗಿದೆ. ಇತ್ತೀಚೆಗೆ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಜಿಲ್ಲೆಯ 7 ಕ್ಷೇತ್ರಗಳಲ್ಲು ಜೆಡಿಎಸ್ ಗೆಲುವು ಸಾಧಿಸಿದೆ.,
ತೆರವಾಗಿರುವ ಶ್ರೀರಾಮುಲು ಕ್ಷೇತ್ರವಾದ ಬಳ್ಳಾರಿ, ಸಿ,ಎಸ್ ಪುಟ್ಟುರಾಜು ಸ್ಪರ್ದಿಸಿದ್ದ ಮಂಡ್ಯ ಹಾಗೂ ಬಿ.ಎಸ್ ಯಡಿಯೂರಪ್ಪ ಅವರ ಶಿವಮೊಗ್ಗ ಲೋಕಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಸದಿರಲು ಚುನಾವಣಾ ಆಯೋಗ ನಿರ್ಧರಿಸಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ. ಮಂಡ್ಯ ಕ್ಷೇತ್ರದ ಲೋಕಸಭೆ ಟಿಕೆಟ್ ಗಾಗಿ ಮಾಜಿ ಶಾಸಕ ಜಿಬಿ ಶಿವಕುಮಾರ್, ಎಲ್ ಆರ್ ಶಿವರಾಮೇಗೌಡ ಹಾಗೂ ಲಕ್ಷ್ಮಿ ಅಶ್ವಿನ್ ಕುಮಾರ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ, ಒಂದು ವೇಳೆ ದೇವೇಗೌಡರೇ ಮಂಡ್ಯದಿಂದ ಸ್ಪರ್ಧಿಸಲು ಬಯಸಿದರೇ ಇವರೆಲ್ಲಾ ಪಕ್ಕಕ್ಕೆ ಸರಿಯುತ್ತಾರೆ
ಮಂಡ್ಯದಿಂದ ದೇವೇಗೌಡರು ಸ್ಪರ್ಧಿಸಿದರೇ ರೈತರ ಸಮಸ್ಯೆಗಳ ಚರ್ಚಿಸಲು ಉತ್ತಮ ವೇದಿಕೆ ಸಿಗುತ್ತದೆ, ಕಾವೇರಿ ನದಿ ನೀರಿನ ಸಮಸ್ಯೆಯನ್ನು ಸಂಸತ್ತಿನಲ್ಲಿ ಚರ್ಚಿಸಲು ಹಿತಾಸಕ್ತಿ ತೋರುತ್ತಾರೆ ಎಂದು ಭಾವಿಸಲಾಗಿದೆ,. ಮಂಡ್ಯದಿಂದ ದೇವೇಗೌಡರ ಸ್ಪರ್ದೆಯಿಂದ ಮೈಸೂರು, ತುಮಕೂರು ಹಾಗೂ ರಾಮನಗರಗಳಲ್ಲಿ ಜೆಡಿಎಸ್ ಮತ್ತಷ್ಟು ಪ್ರಾಬಲ್ಯ ಪಡೆಯಲು ಸಾಧ್ಯವಾಗುತ್ತದೆ. ಆದರೆ ಅಂಬರೀಷ್ ಕೂಡ ಮಂಡ್ಯ ಲೋಕಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


