ಸಿದ್ದರಾಮಯ್ಯ ಜತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಿಎಂ ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ ...

Published On :
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸಿದ್ದರಾಮಯ್ಯ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದರು.
ಸಿದ್ದರಾಮಯ್ಯ ಅವರು ರಾಜಕೀಯದ ಬಗ್ಗೆ ಚರ್ಚೆ ಮಾಡುವುದು ಮತ್ತು ಕುಮಾರಸ್ವಾಮಿ ಅವರು ಬಜೆಟ್ ಮಂಡಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ಸಿಎಂ ಕುಮಾರಸ್ವಾಮಿ ನಿನ್ನೆ ಮಾಜಿ ಸಿಎಂ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು.
ನಾನು ಬಜೆಟ್ ಮಂಡಿಸುತ್ತೇನೋ ಇಲ್ಲವೋ ಗೊತ್ತಿಲ್ಲ. ಆದರೆ ಬಜೆಟ್ ಮಂಡನೆ ವಿಚಾರದಲ್ಲಿ ನಾನು ಯಾರ ಹಂಗಿನಲ್ಲೂ ಇಲ್ಲ. ಬಜೆಟ್ ಮಂಡನೆ ಬೇಕೆ ಬೇಡವೇ ಎಂಬ ಕುರಿತು ಚರ್ಚೆಯಾಗುತ್ತಿದೆ. ಕೆಲವರು ಲೋಕಸಭೆ ಚುನಾವಣೆ ಬಳಿಕ ಬಜೆಟ್ ಮಂಡನೆಗೆ ಸಲಹೆ ನೀಡಿದ್ದಾರೆ. ಆದರೆ ಆ ಬಳಿಕ ನಮ್ಮ ಸರಕಾರ ಇರುತ್ತದೆಯೇ ಇಲ್ಲವೇ ಎಂಬುದೇ ಗೊತ್ತಿಲ್ಲ ಎಂದು ಪರೋಕ್ಷವಾಗಿ ಮಾಜಿ ಸಿಎಂಗೆ ಟಾಂಗ್ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


