ರಾಜಕೀಯ

ಸರ್ಕಾರ ಉಳಿಸಿಕೊಳ್ಳುವುದು ಜೆಡಿಎಸ್-ಕಾಂಗ್ರೆಸ್ ಎರಡಕ್ಕೂ ಅನಿವಾರ್ಯ: ಜಿಟಿ ದೇವೇಗೌಡ

ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಉಳಿಸಿಕೊಂಡು ಹೋಗುವುದು ಎರಡೂ ಪಕ್ಷಗಳಿಗೆ ಅನಿವಾರ್ಯವಾಗಿದೆ ಎಂದು...

ಸರ್ಕಾರ ಉಳಿಸಿಕೊಳ್ಳುವುದು ಜೆಡಿಎಸ್-ಕಾಂಗ್ರೆಸ್ ಎರಡಕ್ಕೂ ಅನಿವಾರ್ಯ: ಜಿಟಿ ದೇವೇಗೌಡ
ಜಿಟಿ ದೇವೇಗೌಡ
Published On :
ಬೆಳಗಾವಿ: ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಉಳಿಸಿಕೊಂಡು ಹೋಗುವುದು ಎರಡೂ ಪಕ್ಷಗಳಿಗೆ ಅನಿವಾರ್ಯವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿ ದೇವೇಗೌಡ ಅವರು, ಸಮ್ಮಿಶ್ರ ಸರ್ಕಾರ ಬೀಳುವುದಕ್ಕೆ ಎರಡೂ ಪಕ್ಷಗಳ ನಾಯಕರೂ ಬಿಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮುಕ್ತ ಭಾರತ ಮಾಡಬೇಕು ಎನ್ನುವುದು ಬಿಜೆಪಿ ಕನಸು. ಇದಕ್ಕೆ ಅವಕಾಶ ನೀಡಬಾರದು ಎಂಬ ಉದ್ದೇಶದಿಂದಲೇ ಕಾಂಗ್ರೆಸ್ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ಜೆಡಿಎಸ್ ಅವಕಾಶ ನೀಡಿದೆ. ಇನ್ನು ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ ಎಂದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ದೇವೇಗೌಡ ಅವರ ನಡುವೆ ಯಾವುದೇ ದ್ವೇಷವಿಲ್ಲ. ದ್ವೇಷ ಇದ್ದಿದ್ದರೆ ಸಮ್ಮಿಶ್ರ ಸರ್ಕಾರ ರಚನೆಯೇ ಆಗುತ್ತಿರಲಿಲ್ಲ ಎಂದು ಉನ್ನತ ಶಿಕ್ಷಣ ಸಚಿವರು ತಿಳಿಸಿದ್ದಾರೆ.
ಬಜೆಟ್ ಮಂಡನೆ ರೈತರ ಸಾಲ ಮನ್ನಾ ಮಾಡಲು ಸಿದ್ದರಾಮಯ್ಯ ಅವರು ಒಪ್ಪಿಕೊಂಡಿದ್ದಾರೆ. ಹಿಂದಿನ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರು ಘೋಷಿಸಿದ ಕೆಲ ಜನಪ್ರಿಯ ಕಾರ್ಯಕ್ರಮಗಳನ್ನು ಮುಂದುವರೆಸಿಕೊಂಡು ಹೋಗವ ಕುರಿತು ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.