ಸಿದ್ದು ನೇತೃತ್ವದಲ್ಲಿ ನಾಳೆ ಸಮನ್ವಯ ಸಮಿತಿ ಸಭೆ
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ 2ನೇ ಸಮನ್ವಯ ಸಮಿತಿ ಸಭೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಭಾನುವಾ ನಡೆಯಲಿದೆ ಎಂದು ತಿಳಿದುಬಂದಿದೆ...

Published On :
ಬೆಂಗಳೂರು; ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ 2ನೇ ಸಮನ್ವಯ ಸಮಿತಿ ಸಭೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಭಾನುವಾ ನಡೆಯಲಿದೆ ಎಂದು ತಿಳಿದುಬಂದಿದೆ.
ಬಜೆಟ್, ಸಾಲಮನ್ನಾ, ಜಿಲ್ಲಾ ಉಸ್ತುವಾರಿ ಸಚಿವರ ನೇಮಕ, ನಿಗಮ ಮಂಡಳಿಗಳ ಪಾಲು ಸೇರಿದಂತೆ ಉಭ ಪಕ್ಷಗಳ ನಡುವೆ ಉಂಟಾಗಿದ್ದ ಗೊಂದಲ ಹಾಗೂ ತಿಕ್ಕಾಟಕ್ಕೆ ಕಾರಣವಾಗಿರುವ ಎಲ್ಲಾ ಅಂಶಗಳ ಕುರಿತು ಚರ್ಚೆ ನಡೆಯಲಿದೆ ಎಂದು ವರದಿಗಳು ತಿಳಿಸಿವೆ.
ಇದಲ್ಲದೆ ಜು.5ಕ್ಕೆ ಬಜೆಟ್ ಮಂಡನೆಯಾಗಲಿದ್ದು, ಈ ಹಿನ್ನಲೆಯಲ್ಲಿ ಎರಡೂ ಪಕ್ಷಗಳಲ್ಲಿನ ಯಾವ ಯಾವ ಸಾಮಾನ್ಯ ಕಾರ್ಯಕ್ರಮಗಳನ್ನು ಮುಂಗಡಪತ್ರದಲ್ಲಿ ಅಳವಡಿಸಬೇಕು ಎಂಬ ಬಗ್ಗೆ ವೀರಪ್ಪ ಮೊಯ್ಲಿ ನೇತೃತ್ವದ ಸಾಮಾನ್ಯ ಕನಿಷ್ಠ ಕಾರ್ಯಕ್ರಮದ (ಸಿಎಂಪಿ) ಕರಡು ಸಮಿತಿ ನೀಡಿರುವ ವರದಿ ಬಗ್ಗೆಯೂ ಚರ್ಚೆ ನಡೆಸುವ ಉದ್ದೇಶದಿಂದ ಈ ಸಭೆಯನ್ನು ಆಯೋಜಿಸಲಾಗಿದೆ ಎನ್ನಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


