ರಾಜಕೀಯ

ಕಾವೇರಿ ತೀರ್ಪು: ಮಾರ್ಚ್ 7ಕ್ಕೆ ಸರ್ವಪಕ್ಷ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಕುರಿತು ಚರ್ಚಿಸಲು ಮುಖ್ಯಮಂತ್ರಿ ....

ಕಾವೇರಿ ತೀರ್ಪು: ಮಾರ್ಚ್ 7ಕ್ಕೆ ಸರ್ವಪಕ್ಷ ಸಭೆ ಕರೆದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 7ಕ್ಕೆ ಸರ್ವಪಕ್ಷ ಸಭೆ ಕರೆದಿದ್ದಾರೆ.
ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳ ಪ್ರಕಾರ, ಸರ್ವಪಕ್ಷ ಸಭೆಗೆ ಕಾವೇರಿ ತೀರದ ಜಿಲ್ಲೆಗಳ ಜನಪ್ರತಿನಿಧಿಗಳಿಗೂ ಆಹ್ವಾನ ನೀಡಲಾಗಿದೆ.
ಫೆಬ್ರವರಿ 16ರಂದು ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ತನ್ನ ಅಂತಿಮ ತೀರ್ಪು ಪ್ರಕಟಿಸಿದ್ದ ಸುಪ್ರೀಂ ಕೋರ್ಟ್, ಕರ್ನಾಟಕಕ್ಕೆ 14.75 ಟಿಎಂಸಿ ಹೆಚ್ಚುವರಿ ನೀರನ್ನು ನೀಡಿತ್ತು. ಅಂತೆಯೇ ಬೆಂಗಳೂರಿಗಾಗಿ 4.5 ಟಿಎಂಸಿ ನೀರನ್ನು ಮೀಸಲಿಟ್ಟು ತಮಿಳುನಾಡಿಗೆ 177.25 ಟಿಎಂಸಿ ನೀರು ಬಿಡುವಂತೆಯೂ ಮತ್ತು ಕೇರಳ ಮತ್ತು ಪಾಂಡಿಚೇರಿಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿತ್ತು. ಅಲ್ಲದೆ ಇನ್ನು 6 ವಾರಗಳೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ಆದರೆ ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.