ಬಿಜೆಪಿ ಚುನಾವಣಾ ಕಾರ್ಯತಂತ್ರ: ನಾಳೆ ಮಂಗಳೂರಿಗೆ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪರವಾಗಿ ವ್ಯಾಪಕ ಪ್ರಚಾರ ನಡೆಸಲಿದ್ದಾರೆ. ...

Published On :
ಬೆಂಗಳೂರು:ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪರವಾಗಿ ವ್ಯಾಪಕ ಪ್ರಚಾರ ನಡೆಸಲಿದ್ದಾರೆ. ಯೋಗಿ ಆದಿತ್ ನಾಥ್ ಪ್ರಚಾರಕ್ಕೆ ವೇದಿಕೆ ಸಿದ್ದವಾಗಿದ್ದು ನಾಳೆ ಕಲ ನಗರಿ ಮಂಗಳೂರಿಗೆ ಆಗಮಿಸಲಿದ್ದಾರೆ
ಮಾರ್ಚ್ 3 ರಂದು ಆರಂಭವಾದ ಕರ್ನಾಟಕ ಜನ ಸುರಕ್ಷಾ ಯಾತ್ರೆಯ ಸಮಾರೋಪದ ರ್ಯಾಲಿಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಪದೇ ಪದೇ ಕೋಮು ಸಂಘರ್ಷದ ದಳ್ಳುರಿಯಲ್ಲಿ ಬೇಯುತ್ತಿರುವ ಕರಾವಳಿಯಲ್ಲಿ ಭದ್ರತೆ ಹಾಗೂ ಸುರಕ್ಷತೆಯ ಭರವಸೆ ಮೂಡಿಸಲು ಈ ಯಾತ್ರೆ ಹಮ್ಮಿಕೊಳ್ಳಲಾಗಿತ್ತು.,ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಮನೇಕಾ ಗಾಂಧಿ ಉಡುಪಿಯಲ್ಲಿ ನಡೆಯುವೆ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಮಾರ್ಚ್ 6 ರ ಸಂಜೆ4.30ಕ್ಕೆ ಮಂಗಳೂರಿಗೆ ಯೋಗಿ ಆದಿತ್ಯನಾಥ್ ಆಗಮಿಸಲಿದ್ದು ಬೃಹತ್ ರ್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ. ಅಪರಾಧ ಪ್ರಮಾಣವನ್ನು ಹದ್ದು ಬಸ್ತಿನಲ್ಲಿಡಲು ಕಾನೂನು ಮತ್ತು ಸುವ್ಯವಸ್ಥೆ ಸರಿಯಾಗಿರಬೇಕು ಎಂದರೇ ಪೊಲೀಸರಿಗೆ ಮುಕ್ತ ಅವಕಾಶ ನಿಡಬೇಕು ಎಂದು ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


