ಸಿದ್ದರಾಮಯ್ಯನವರದ್ದು ರಕ್ತಪಾತದ ಸರ್ಕಾರ: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಟೀಕೆ
ಸಿದ್ಧರಾಮಯ್ಯ ಸರ್ಕಾರ ರಕ್ತಪಾತದ ಸರ್ಕಾರ ಎಂದು ಕೇಂದ್ರ ಸಚಿವ ಹಾಗೂ ಭಾರತೀಯ ಜನತಾ ಪಾರ್ಟಿ ಮುಖಂಡ ಅನಂತ್ ಕುಮಾರ್ ಹೆಗಡೆ ಮತ್ತೊಮ್ಮೆ ...

ಮಂಗಳೂರು: ಸಿದ್ಧರಾಮಯ್ಯ ಸರ್ಕಾರ ರಕ್ತಪಾತದ ಸರ್ಕಾರ ಎಂದು ಕೇಂದ್ರ ಸಚಿವ ಹಾಗೂ ಭಾರತೀಯ ಜನತಾ ಪಾರ್ಟಿ ಮುಖಂಡ ಅನಂತ್ ಕುಮಾರ್ ಹೆಗಡೆ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.
ತಮ್ಮ ಹರಿತ ಮಾತುಗಳು ಮತ್ತು ಟೀಕೆಗಳಿಂದ ಚರ್ಚೆಗೆ ಗ್ರಾಸವಾಗುವ ಸಚಿವ ಅನಂತ್ ಕುಮಾರ್ ಹೆಗಡೆ ಇದೀಗ ಮತ್ತೊಮ್ಮೆ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಮಂಗಳೂರಿನಲ್ಲಿ ನಿನ್ನೆ ಜನಸುರಕ್ಷಾ ಯಾತ್ರೆ ಸಮಾರಂಭದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಕಳೆದ 5 ವರ್ಷಗಳ ನಿಮ್ಮ ಸರ್ಕಾರದ ಆಡಳಿತಾವಧಿಯಲ್ಲಿ 7,748 ಕೊಲೆಗಳು, 7,238 ಅತ್ಯಾಚಾರಗಳು ಮತ್ತು 11,000 ಅಪಹರಣಗಳು ನಡೆದಿವೆ. ಇಲ್ಲಿ ಜನಸಾಮಾನ್ಯರ ಜೀವಕ್ಕೆ ರಕ್ಷಣೆ ಇಲ್ಲದಂತಾಗಿದೆ, ಇದು ರಕ್ತಪಾತದ ಸರ್ಕಾರ ಎಂದು ಆರೋಪಿಸಿದ್ದಾರೆ.
ಕರ್ನಾಟಕವನ್ನು ಆಳುತ್ತಿರೋದು ಪಾತಕ ಸರ್ಕಾರ. ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಪಿ. ರಾಜ್ಯದಲ್ಲಿರುವುದು ಕೊಲೆಗಡುಕ ಸರ್ಕಾರ. ಈ ಕಟುಕ ಸಿಎಂ ಇರೋವರೆಗೂ ರಾಜ್ಯದ ಜನರಿಗೆ ನೆಮ್ಮದಿ ಇರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಪಾಪಿಯಾಗಿದ್ದು ಮುಂದೆ ಅಧಿಕಾರಕ್ಕೆ ಬರಲ್ಲ. ಅಧಿಕಾರಕ್ಕೆ ಬರಲು ಕಾಂಗ್ರೆಸ್ ನವರೇ ಬಿಡಲ್ಲ ಅಂತ ಅನಂತ್ ಕುಮಾರ್ ಹೆಗಡೆ ಟೀಕಿಸಿದರು.
ರಾಜ್ಯ ವಿಧಾನಸಭೆ ಚುನಾವಣೆಗೆ ಮತದಾನದ ದಿನಾಂಕ ಹತ್ತಿರವಾಗುತ್ತಿದ್ದಂತೆ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಾಯಕರ ಆರೋಪ-ಪ್ರತ್ಯಾರೋಪಗಳು ಜೋರಾಗಿ ನಡೆಯುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


