ಬಿಜೆಪಿಯವರು ಕೊಲೆಗಾರರು, ರಕ್ತ ಹೀರುವವರು, ಜಿಹಾದಿಗಳು: ರಾಮಲಿಂಗಾ ರೆಡ್ಡಿ
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಡುವಿನ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿವೆ, ಆಡಳಿತಾರೂಢ ...

Published On :
ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಡುವಿನ ಆರೋಪ-ಪ್ರತ್ಯಾರೋಪಗಳು ಮುಗಿಲು ಮುಟ್ಟಿವೆ, ಆಡಳಿತಾರೂಢ ಕಾಂಗ್ರೆಸ್ ಬಿಜೆಪಿ ವಿರುದ್ಧ ಹರಿಹಾಯ್ದಿದೆ.
ಬಿಜೆಪಿ ಮುಖಂಡರು ಕೊಲೆಗಾರರು, ಕೊಲೆಗಡುಕರು, ರಕ್ತ ಹೀರುವವರು ಹಾಗೂ ಜಿಹಾದಿಗಳು ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಕಿಡಿಕಾರಿದ್ದಾರೆ, ಬಿಜೆಪಿ ಮುಖಂಡರಾದ ಅನಂತ್ ಕುಮಾರ್ ಹೆಗ್ಡೆ, ಶೋಭಾ ಕರಂದ್ಲಾಜೆ, ಸಿ.ಟಿ ರವಿ ಹಾಗೂ ನಳಿನ್ ಕುಮಾರ್ ಕಟೀಲ್ ರಾಜಕೀಯಕ್ಕೆ ನಾಲಾಯಕ್ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಬುಧವಾರ ಮಂಗಳೂರಿನಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ನಳಿನ್ ಕುಮಾರ್ ಹಾಗೂ ಶೋಭ ಕರಂದ್ಲಾಜೆ ಮತ್ತು ಅನಂತ್ ಕುಮಾರ್ ಹೆಗಡೆ ತಮ್ಮ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಕೊಲೆಗೆಡುಕ ಮತ್ತು ಜಿಹಾದಿಗಳ ಬೆಂಬಲಿಗ ಎಂದು ಆರೋಪಿಸಿದ್ದರು.ಈ ಹೇಳಿಕೆಗೆ ರಾಮಲಿಂಗಾ ರೆಡ್ಡಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ ನಾಯಕರು ರಾಜಕೀಯಕ್ಕೆ ಕಪ್ಪು ಚುಕ್ಕೆ, ಅವರಿಗೆ ಯಾವುದೇ ಗೌರವ, ಸಂಸ್ಕೃತಿ ಹಾಗೂ ಸಭ್ಯತೆಯಿಲ್ಲ, ಅವರು ರಾಜಕೀಯಕ್ಕೆ ಹಾಗೂ ಅಧಿಕಾರ ಪಡೆಯುವುದಕ್ಕೆ ಅನರ್ಹರು ಎಂದು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋಮು ಸಂಘರ್ಷ ಸೃಷ್ಟಿಸುತ್ತಿದ್ದಾರೆ, ಹಿಂದೂ ಸಂಘಟನೆಗಳ ಮುಖಂಡರ ಸಾವಿನ ಬಗ್ಗೆ ವದಂತಿ ಹಬ್ಬಿಸುತ್ತಿದ್ದಾರೆ, ಸುಮಾರು 24 ಹಿಂದೂ ಯುವಕರನ್ನು ಕೊಲ್ಲಲಾಗಿದೆ ಎಂದು ಅಂಕಿ ಅಂಶ ನೀಡಿದೆ. ಆದರೆ 10 ಮಂದಿ ಮಾತ್ರ ಕೋಮು ಸಂಬಂಧಿತ ಘಟನೆಗಳಿಂದ ಸಾವನ್ನಪ್ಪಿದ್ದಾರೆ,11 ಮಂದಿ ಮುಸ್ಲಿಂ ಯವಕರುಗಳನ್ನು ವಿವಿಧ ಹಿಂದೂ ಸಂಘಟನೆಗಳ ನಾಯಕರಿಂದ ಕೊಲ್ಲಲ್ಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರದ ಎನ್ ಸಿ ಆರ್ ಬಿ ಮಾಹಿತಿ ಪ್ರಕಾರ ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ ದೇಶದ ನಂ1 ಕ್ರೈಂ ರಾಜ್ಯ ಹಾಗೂ ಮಧ್ಯ ಪ್ರದೇಶ ದೇಶದ ನಂ1 ರೇಪ್ ರಾಜ್ಯವಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದಂತೆ ಕರ್ನಾಟಕವನ್ನು ಹೇಗೆ ಕ್ರೈಂ ರಾಜ್ಯ ವನ್ನಾಗಿಸಬೇಕೆಂದು ಟ್ರೈನಿಂಗ್ ನೀಡಲು ಮಂಗಳೂರಿನ ಜನಸುರಕ್ಷಾ ಯಾತ್ರೆ ಗೆ ಆಗಮಿಸಿದ್ದಾರೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.
ಬಿಜೆಪಿಯವರು ಸೇವ್ ಬೆಂಗಳೂರು ಪಾದಯಾತ್ರೆ ಆರಂಭಿಸಿದ್ದಾರೆ, ಆದರೆ ಬೆಂಗಳೂರನ್ನು ಬಿಜೆಪಿಯವರಿಂದ ರಕ್ಷಿಸಿದ್ದು ಕಾಂಗ್ರೆಸ್ಸಿಗರು ಎಂದು ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


