ಸರ್ಕಾರಿ ಆಹ್ವಾನ ಪತ್ರಿಕೆಗಳಲ್ಲಿ ಯತೀಂದ್ರ- ಸುನೀಲ್ ಬೋಸ್ ಹೆಸರು: ಕಾವೇರಿದ ಚರ್ಚೆ
ಸರ್ಕಾರಿ ಆಹ್ವಾನ ಪತ್ರಿಕೆಗಳಲ್ಲಿ ಸಿಎಂ ಪುತ್ರ ಯತೀಂದ್ರ ಹಾಗೂ ಲೋಕೋಪಯೋಗಿ ಸಚಿವ ಎಚ್ ಸಿ ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಅವರ ಹೆಸರು...

Published On :
ಮೈಸೂರು: ಸರ್ಕಾರಿ ಆಹ್ವಾನ ಪತ್ರಿಕೆಗಳಲ್ಲಿ ಸಿಎಂ ಪುತ್ರ ಯತೀಂದ್ರ ಹಾಗೂ ಲೋಕೋಪಯೋಗಿ ಸಚಿವ ಎಚ್ ಸಿ ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಅವರ ಹೆಸರು ನಮೂದಿಸಿರುವುದು ಮೈಸೂರು ಜಿಲ್ಲಾ ಪಂಚಾಯತ್ ಸಭೆಯಲ್ಲಿ ಕಾವೇರಿದ ಚರ್ಚೆಗೆ ಕಾರಣವಾಯಿತು.
ಮೈಸೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಗಳಲ್ಲಿ ಯಾವುದೇ ಅಧಿಕೃತ ಸ್ಥಾನವಿಲ್ಲದಿದ್ದರೂ ಯತೀಂದ್ ಮತ್ತು ಸುನೀಲ್ ಬೋಸ್ ಹೆಸರನ್ನು ಹಾಕಿರುವುದರ ಹಿನ್ನೆಲೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಭೆಯಲ್ಲಿ ಆಗ್ರಹಿಸಲಾಯಿತು,
ಹಲವು ಸರ್ಕಾರಿ ಕಾರ್ಯಕ್ರಮಗಳು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳಾಗಿ ಬದಲಾಗುತ್ತಿವೆ, ವರುಣಾ ಮತ್ತು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚಿನ ಶಿಷ್ಟಾಚಾರ ಉಲ್ಲಂಘನೆ ಆಗುತ್ತಿವೆ. ಯತೀಂದ್ರ ಮತ್ತು ಸುನೀಲ್ ಬೋಸ್ ಇಬ್ಬರು ಸರ್ಕಾರದ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ, ಆದರೆ ಸ್ಥಳೀಯ ಜಿಲ್ಲಾ ಪಂಚಾಯತ್ ಸದಸ್ಯರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಯತೀಂದ್ರSunil Boseಸುನೀಲ್ ಬೋಸ್Yathindragovernment invitationsMysuru zilla panchayatಸರ್ಕಾರಿ ಆಹ್ವಾನ ಪತ್ರಿಕೆಮೈಸೂರು ಜಿಲ್ಲಾ ಪಂಚಾಯತ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


