ರಾಜಕೀಯ

ಕಾಂಗ್ರೆಸ್ ಟಿಕೆಟ್ ಗಾಗಿ ಕುಟುಂಬದಲ್ಲಿಯೇ ಹೆಚ್ಚಾದ ಪೈಪೋಟಿ

ರಾಜ್ಯ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಂತೆಯೇ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಭಾರೀ ಪೈಪೋಟಿ ಕಂಡುಬರುತ್ತಿದೆ. ಅದರಲ್ಲೂ ಕುಟುಂಬದಲ್ಲಿಯೇ ಪೈಪೋಟಿ ಹೆಚ್ಚಾಗುತ್ತಿದೆ.

ಕಾಂಗ್ರೆಸ್ ಟಿಕೆಟ್ ಗಾಗಿ ಕುಟುಂಬದಲ್ಲಿಯೇ ಹೆಚ್ಚಾದ ಪೈಪೋಟಿ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಂತೆಯೇ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಭಾರೀ ಪೈಪೋಟಿ ಕಂಡುಬರುತ್ತಿದೆ. ಅದರಲ್ಲೂ ಕುಟುಂಬದಲ್ಲಿಯೇ ಪೈಪೋಟಿ  ಹೆಚ್ಚಾಗುತ್ತಿದೆ.

ನಗರಾಭಿವೃದ್ಧಿ ಸಚಿವ ರೋಷನ್ ಬೇಗ್  ತನ್ನ ಮಗ ರುಮನ್ ಬೇಗ್  ಅವರಿಗೆ ಟಿಕೆಟ್ ಕೊಡಿಸಲು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಶಿವಾಜಿನಗರ ವಿಧಾಸಭಾ ಕ್ಷೇತ್ರವನ್ನು ರೋಷನ್ ಬೇಗ್ ಪ್ರತಿನಿಧಿಸುತ್ತಿದ್ದಾರೆ. ಈಗ ಟಿಕೆಟ್ ಗಾಗಿ ರೋಷನ್ ಬೇಗ್ ಹಾಗೂ ರುಮನ್  ಇಬ್ಬರೂ ಅರ್ಜಿ ಸಲ್ಲಿಸಿದ್ದಾರೆ.

ರಾಜ್ಯಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದ್ದ ರೋಷನ್ ಬೇಗ್ ತನ್ನ ಮಗನಿಗೆ ಶಿವಾಜಿನಗರದಿಂದ ಟಿಕೆಟ್ ಕೊಡಿಸಿ ತಾನೂ ರಾಜ್ಯಸಭಾ ಸದಸ್ಯನಾಗುವ ಆಕಾಂಕ್ಷಿಯಾಗಿದ್ದರು. ಆದರೆ, ಅವರ ಆಸೆಗೆ ಹೈಕಮಾಂಡ್ ತಣ್ಣೀರು ಎರಚಿದೆ. ಹೀಗಾಗಿ ಮತ್ತೆ ಶಿವಾಜಿನಗರಿಂದ ರೋಷನ್ ಬೇಗ್ ಸ್ಪರ್ಧಿಸಬೇಕಾಗಿದೆ.

ಇದೇ ರೀತಿಯಲ್ಲಿ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ವಿಧಾನಸಭಾ ಕ್ಷೇತ್ರವೂ ಆಗಿದೆ.  ವಿಧಾನಪರಿಷತ್ ಸದಸ್ಯೆ ಮೋಟಮ್ಮ ಹಾಗೂ ಅವರ ಪುತ್ರಿ ನಯನಾ ಕೂಡಾ  ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಮೋಟಮ್ಮ ಹೊರತುಪಡಿಸಿದಂತೆ  ವಿ.ಎಸ್. ಉಗ್ರಪ್ಪ ಮೊಳಕಾಲ್ಮೂರಿನಿಂದ ಕೆ. ಸಿ ಕೊಂಡಯ್ಯ, ಬಳ್ಳಾರಿ ನಗರ ಹಾಗೂ  ಶ್ರೀನಿವಾಸ್ ಮಾನೆ ಹುಬ್ಭಳ್ಳಿ-ಧಾರವಾಡ ಕೇಂದ್ರ  ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ.

224 ವಿಧಾನಸಭಾ ಕ್ಷೇತ್ರಗಳಿಗೆ 2,500ಕ್ಕೂ ಹೆಚ್ಚು ಟಿಕೆಟ್ ಆಕಾಂಕ್ಷಿಗಳಿದ್ದಾರೆ. 1 ಸಾವಿರ ಮಂದಿ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ ಎಂದು ಹಿರಿಯ ಕೆಪಿಸಿಸಿ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಿಕೆಟ್ ಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಇಂದಿನವರೆಗೂ ವಿಸ್ತರಿಸಲಾಗಿದ್ದು, ಅರಸಿಕೆರೆ, ಚಿತ್ರದುರ್ಗ, ಬಳ್ಳಾರಿ ನಗರದಿಂದ ಹೆಚ್ಚು ಆಕಾಂಕ್ಷಿಗಳು ಟಿಕೆಟ್ ಬಯಸಿ  ಅರ್ಜಿ ಸಲ್ಲಿಸಿದ್ದಾರೆ.
ಟಿಕೆಟ್ ಹಂಚಿಕೆ ಕಾಂಗ್ರೆಸ್ ಹೈಕಮಾಂಡ್ ಗೆ ತಲೆ ನೋವಾಗಿ ಪರಿಣಮಿಸಿದೆ.

ಮತ್ತೊಂದೆಡೆ ಜೆಡಿಎಸ್ ನ ಏಳು ಮಂದಿ ಬಂಡಾಯ ಅಭ್ಯರ್ಥಿಗಳಾದ  ಜಮೀರ್ ಅಹ್ಮದ್ ಖಾನ್, ಚಲುವನಾರಾಯಣಸ್ವಾಮಿ, ಇಕ್ಬಲ್ ಅನ್ಸಾರಿ, ಎಚ್. ಸಿ. ಬಾಲಕೃಷ್ಣ, ರಮೇಶ್ ಬಂಡಿಸಿದ್ದೇಗೌಡ, ಭೀಮಾನಾಯಕ್,  ಅಖಂಡ ಶ್ರೀನಿವಾಸ ಮೂರ್ತಿ ಭೀತಿಯಲ್ಲಿಯೇ ಟಿಕೆಟ್ ಗಾಗಿ  ಕಾಂಗ್ರೆಸ್ ಬಾಗಿಲು ತಟ್ಟಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಚಲಾಯಿಸಿ ಜೆಡಿಎಸ್ ತೊರೆದಿರುವ ಈ  ಏಳು ಮಂದಿ ಶಾಸಕರು ಕಾಂಗ್ರೆಸ್ ನಿಂದ ಟಿಕೆಟ್ ದೊರೆಯುವ ವಿಶ್ವಾಸದಲ್ಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.