ಜೆಡಿಎಸ್ ತನ್ನ ಸಾಮರ್ಥ್ಯದ ಮೇಲೆ ಅಧಿಕಾರಕ್ಕೆ ಬರುವುದು ಶತಃಸಿದ್ಧ: ದೇವೇಗೌಡ
ಮುಂಬಯಿ ಕರ್ನಾಟಕ ಪ್ರದೇಶದಲ್ಲಿ ತಮ್ಮ ಪಕ್ಷ ಬಲಗೊಳ್ಳುತ್ತಿದ್ದು, ಜೆಡಿಎಸ್ ತನ್ನ ಸ್ವಂತ ಶಕ್ತಿಯ ಬಲದಿಂದ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ ...

Published On :
ಬೆಳಗಾವಿ: ಮುಂಬಯಿ ಕರ್ನಾಟಕ ಪ್ರದೇಶದಲ್ಲಿ ತಮ್ಮ ಪಕ್ಷ ಬಲಗೊಳ್ಳುತ್ತಿದ್ದು, ಜೆಡಿಎಸ್ ತನ್ನ ಸ್ವಂತ ಶಕ್ತಿಯ ಬಲದಿಂದ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಜೆಡಿಎಸ್ ಮತ್ತು ಬಿಎಸ್‌ಪಿ ಜಂಟಿಯಾಗಿ ನಗರದಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಒಂದು ವೇಳೆ ಉತ್ತರ ಕರ್ನಾಟಕ ಜನ ಅಧಿಕಾರಕ್ಕೆ ಬರಲು ತಮಗೆ ಬೆಂಬಲ ನೀಡಿದರೇ ಈ ಭಾಗದ ಜನರಿಗೆ ಉತ್ತಮ ಜೀವನ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಈ ಹಿಂದೆ ತೀರಾ ಹಿನ್ನಡೆಯಾಗಿತ್ತು, ಆದರೆ ಈಗ ಕೆಲವು ಕ್ಷೇತ್ರಗಳಲ್ಲಿ ಜಯ ಸಾಧಿಸುವ ಆತ್ನವಿಶ್ವಾಸದಲ್ಲಿದೆ, ಗದಗದಲ್ಲಿ 1 ಧಾರವಾಡದಲ್ಲಿ 3, ವಿಜಯಾಪುರದಲ್ಲಿ 5 ಕ್ಷೇತ್ರಗಳಿಗೆ ಟಿಕೆಟ್ ಪ್ರಕಟಿಸಲಾಗಿದ್ದು, ಉಳಿದ ಕ್ಷೇತ್ರಗಳಿಗೆ ಶೀಘ್ರವೇ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ. ರುವ ವಿಧಾನ ಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಹಾಗೂ ಎನ್‌ಸಿಪಿ ಜತೆ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


