ಚಾಮುಂಡೇಶ್ವರಿ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ: 123 ಹಾಲಿ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ಖಚಿತ!
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನ ಹಾಲಿ 123 ಶಾಸಕರಿಗೆ ಟಿಕೆಟ್ ಸಿಗುವುದು ಬಹುತೇಕ ಖಚಿತವಾಗಿದೆ....

Published On :
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನ ಹಾಲಿ 123 ಶಾಸಕರಿಗೆ ಟಿಕೆಟ್ ಸಿಗುವುದು ಬಹುತೇಕ ಖಚಿತವಾಗಿದೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ರೆಸಾರ್ಟ್‌ವೊಂದರಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು ಅಭ್ಯರ್ಥಿಗಳ ಪಟ್ಟಿ ಸಿದ್ಧ ಪಡಿಸಲಾಗುತ್ತಿದೆ.
ರಾಜ್ಯದ 224 ಕ್ಷೇತ್ರಗಳಿಂದ ಸ್ಪರ್ಧಿಸಲು 1.570 ಅರ್ಜಿಗಳು ಬಂದಿವೆ, ಹೀಗಾಗಿ ಬಂಡಾಯ ಹಾಗೂ ಒಳಜಗಳ ತಪ್ಪಿಸಲು ಹಾಲಿ ಶಾಸಕರಿಗೆ ಟಿಕೆಟ್ ನೀಡಲು ಸಮಿತಿ ನಿರ್ಧರಿಸಿದೆ.
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಿದ 90 ಕ್ಷೇತ್ರಗಳಲ್ಲಿ ಹೆಚ್ಚಿನ ಗಮನ ಹರಿಸಲು ಸಮಿತಿಯಲ್ಲಿ ಚರ್ಚೆ ನಡೆಸಲಾಗಿದೆ.ಇನ್ನೂ ಮಾರ್ಚ್ 26 ರಂದು ಹಾಲಿ ಶಾಸಕರೊಂದಿಗೆ ಸಮಿತಿ ಸಭೆ ನಡೆಸಿ ಚರ್ಚಿಸಲಿದೆ, ಸಾಮಾಜಿಕ ನ್ಯಾಯದ ಆಧಾರದ ಮೇಲೆ ಟಿಕೆಟ್ ಹಂಚಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಗೆಲವು ಸಾಧಿಸುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಲಾಗುವುದು, ಹಾಲಿ ಶಾಸಕರು ಮತ್ತು ಜೆಡಿಎಸ್ ಬಂಡಾಯ ಶಾಸಕರ ಬಗ್ಗೆ ಸಭೆಯಲ್ಲಿ ಯಾವುದೇ ಚರ್ಚೆ ನಡೆಸಿಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ,ಕೆ ಶಿವಕುಮಾರ್ ತಿಳಿಸಿದ್ದಾರೆ,
ಚುನಾವಣಾ ಸಮಿತಿ 125 ಅಭ್ಯರ್ಥಿಗಳ ಆಯ್ಕೆಗೆ ಅಂತಿಮ ರೂಪ ನೀಡುವ ಜೊತೆಗೆ ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಕುರಿತು ಸುದೀರ್ಘ ಚರ್ಚೆ ನಡೆಸಿತು. ಗೆಲ್ಲುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ಎಂದು ನಿರ್ಧರಿಸಿರುವುದರಿಂದ ಹಿರಿಯ ನಾಯಕರು ತಮ್ಮ ಪುತ್ರ ಪುತ್ರಿಯರಿಗೆ ಟಿಕೆಟ್ ನೀಡಬೇಕೆಂದು ಒತ್ತಡ ಹಾಕುವ ಸಮಸ್ಯೆಯಿಂದ ಮುಕ್ತಿ ದೊರೆತಿದೆ ಎನ್ನಲಾಗಿದೆ.
ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಕೆಲ ತಿಂಗಳುಗಳ ಹಿಂದೆ ಘೋಷಿಸಿದ್ದರು. ಪರಮೇಶ್ವರ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ರಾಮಲಿಂಗಾ ರೆಡ್ಡಿ ವಿರೋಧ ವ್ಯಕ್ತ ಪಡಿಸಿದ್ದರು.
ಇನ್ನೂ ಸಿಎಂ ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ದಿಸಲು ಬಯಸಿದ್ದಾರೆ. ವರುಣಾ ಕ್ಷೇತ್ರವನ್ನು ತಮ್ಮ ಪುತ್ರ ಡಾ. ಯತೀಂದ್ರ ಅವರಿಗೆ ಬಿಟ್ಟು ಕೊಡಲಿದ್ದಾರೆ, ಹಾಗೆಯೇ ಲೋಕೋಪಯೋಗಿ ಸಚಿವ ಎಚ್.ಸಿ ಮಹಾದೇವಪ್ಪ ಟಿ ನರಸಿಪುರ ಕ್ಷೇತ್ರದಿಂದ ಸಿ.ವಿ.ರಾಮನ್ ನಗರಕ್ಕೆ ಬದಲಿಸಲಿದ್ದಾರೆ, ಟಿ. ನರಸಿಪುರ ಕ್ಷೇತ್ರದಿಂದ ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


