ರಾಜಕೀಯ

ಬಂಡಾಯ ಶಾಸಕರ ವಿರುದ್ಧದ ಅನರ್ಹತೆ ಅರ್ಜಿ ವಿಚಾರಣೆ ನಡೆಸಿ : ಸ್ಪೀಕರ್ ಗೆ ಜೆಡಿಎಸ್ ಮನವಿ

2016 ರಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಏಳು ಶಾಸಕರ ವಿರುದ್ಧ ಕಾನೂನು ಕ್ರಮಕ್ಕೆ ಹೈಕೋರ್ಟ್‌ ಮೊರೆ ಹೋಗಲು ನಿರ್ಧರಿಸಿರುವ ...

ಬಂಡಾಯ ಶಾಸಕರ ವಿರುದ್ಧದ ಅನರ್ಹತೆ ಅರ್ಜಿ ವಿಚಾರಣೆ ನಡೆಸಿ : ಸ್ಪೀಕರ್ ಗೆ ಜೆಡಿಎಸ್ ಮನವಿ
ಎಚ್.ಡಿ ಕುಮಾರಸ್ವಾಮಿ
Published On :
ಬೆಂಗಳೂರು: 2016 ರಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಏಳು ಶಾಸಕರ ವಿರುದ್ಧ ಕಾನೂನು ಕ್ರಮಕ್ಕೆ ಹೈಕೋರ್ಟ್‌ ಮೊರೆ ಹೋಗಲು ನಿರ್ಧರಿಸಿರುವ ಜೆಡಿಎಸ್ 7 ಬಂಡಾಯ ಶಾಸಕರ ಅನರ್ಹತೆ ಸಂಬಂಧಿತ ಪಕ್ಷ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದೆ.
ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗೆ ಮತ ನೀಡದೇ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿದ್ದರಿಂದಾಗಿ ಅವರ ವಿರುದ್ಧ ವಿಧಾನಸಭಾ ಸ್ಪೀಕರ್‌ಗೆ ದೂರು ನೀಡಲಾಗಿತ್ತು. ಆದರೆ, ಸ್ಪೀಕರ್‌ ಇಲ್ಲಿಯವರೆಗೂ ಕ್ರಮ ತೆಗೆದುಕೊಂಡಿಲ್ಲ,
ಈ ಸಂಬಂಧ ವಿಧಾನಸಭೆ ಸ್ಪೀಕರ್  ಕಚೇರಿಗೆ ಗುರುವಾರ ಪತ್ರ ಸಲ್ಲಿಸಿರುವ ಜೆಡಿಎಸ್, ತಮ್ಮ ಅರ್ಜಿಯನ್ನು ಹಲವು ತಿಂಗಳುಗಳಿಂದ ವಿಚಾರಣೆಗೆ ತೆಗೆದು ಕೊಂಡಿಲ್ಲ, ಈ ಸಂಬಂಧ ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಕೂಡಲೇ ಸ್ಪೀಕರ್ ಅವರು ಈ ವಿಷಯವನ್ನು ಪರಿಗಣನೆಗೆ ತೆಗೆದುಕೊಂಡು ಶನಿವಾರ ಅಥವಾ ಸೋಮವಾರ ವಿಚಾರಣೆ ನಡೆಸಬೇಕೆಂದು ಕೋರಿದೆ.
ಮಾರ್ಚ್ 23 ರಂದು ರಾಜ್ಯಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಪಕ್ಷದಿಂದ ಉಚ್ಚಾಟಿಸಿರುವ 7 ಬಂಡಾಯ ಅಭ್ಯರ್ಥಿಗಳು ಮತ ಚಲಾಯಿಸದಂತೆ ತಡೆಯಲು ಈ ಕ್ರಮ ಕೈಗೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.