ರಾಹುಲ್ ಕರ್ನಾಟಕ ಭೇಟಿ ಸಂದರ್ಭ ಏಳು ಜೆಡಿಎಸ್ ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ
ರಾಹುಲ್ ಗಾಂಧಿ ಇದೇ ತಿಂಗಳ 24 ಹಾಗೂ 25 ರಂದು ಮೈಸೂರು , ಚಾಮರಾಜನಗರ ಜಿಲ್ಲೆಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾತ್ರೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಜೆಡಿಎಸ್ ನ ಬಂಡಾಯ ಶಾಸಕರುಗಳು ಕೈ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಮೈಸೂರು: ಹೈದ್ರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿನ ಯಶಸ್ವಿ ಜನಾಶೀರ್ವಾದ ಯಾತ್ರೆಯ ಬಳಿಕ ರಾಹುಲ್ ಗಾಂಧಿ ಇದೀಗ ಮೂರನೇ ಹಂತದಲ್ಲಿ ಇದೇ ತಿಂಗಳ 24 ಹಾಗೂ 25 ರಂದು ಮೈಸೂರು , ಚಾಮರಾಜನಗರ ಜಿಲ್ಲೆಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾತ್ರೆ ನಡೆಸಲಿದ್ದಾರೆ.
ರಾಹುಲ್ ಗಾಂಧಿ ಮಂಡ್ಯ ಜಿಲ್ಲೆಯ ಮಳವಳ್ಳಿ ಮತ್ತಿತರ ಕಡೆಗಳಲ್ಲೂ ಪ್ರವಾಸ ನಡೆಸಲಿದ್ದಾರೆ.ರಾಹುಲ್ ಗಾಂಧಿ ಅವರ ಈ ಯಾತ್ರೆ ಯಶಸ್ವಿಗೊಳಿಸಲು ಕಾಂಗ್ರೆಸ್ ಪಣತೊಟ್ಟಿದೆ.
ಮೈಸೂರಿನ ಮಹಾರಾಜ ಕಾಲೇಜ್ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ಸುಮಾರು 1 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ.
ಕನ್ನಡ ಸಾಹಿತ್ಯ ಸಮ್ಮೇಳನ, ಅಂತಾರಾಷ್ಟ್ರೀಯ ಅಂಬೇಡ್ಕರ್ ಸಮ್ಮೇಳನ, ದಸರಾ ಸೇರಿದಂತೆ ಮತ್ತಿತರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸಿದ ಲೋಕೋಪಯೋಗಿ ಸಚಿವ ಡಾ. ಎಚ್. ಸಿ. ಮಹಾದೇವಪ್ಪ ಅವರಿಗೆ ಇದರ ಜವಾಬ್ದಾರಿ ವಹಿಸಲಾಗಿದೆ.
ಈ ಸಂದರ್ಭದಲ್ಲಿ ಜೆಡಿಎಸ್ ನ ಬಂಡಾಯ ಶಾಸಕರುಗಳಾದ ಎನ್. ಚಲುವರಾಯಸ್ವಾಮಿ, ಎಚ್. ಸಿ. ಬಾಲಕೃಷ್ಣ, ಜಮ್ಮೀರ್ ಅಹಮ್ಮದ್ ಖಾನ್, ಅಖಂಡ ಶ್ರೀನಿವಾಸ ಮೂರ್ತಿ, ಇಕ್ಬಾಲ್ ಅನ್ಸಾರಿ, ರಮೇಶ್ ಬಂಡಿಸಿದ್ದೇಗೌಡ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ.
ಈಗಾಗಲೇ ಈ ನಾಯಕರು ಕಾಂಗ್ರೆಸ್ ಪರ ಗುರುತಿಸಿಕೊಂಡಿದ್ದು, ಅಂದು ಅಧಿಕೃತವಾಗಿ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


