ರಾಜ್ಯಸಭೆ ಚುನಾವಣೆಯಲ್ಲಿ ಬಂಡಾಯ ಶಾಸಕರಿಗೆ ಮತದಾನದ ಅವಕಾಶ ಬೇಡ: ಜೆಡಿಎಸ್ ಶಾಸಕರು
ಪಕ್ಷದಿಂದ ಅಮಾನತುಗೊಂಡಿರುವ 7 ಬಂಡಾಯ ಶಾಸಕರಿಗೆ ಮಾರ್ಚ್ 23 ರಂದು ನಡೆಯುವ ರಾಜ್ಯ ಸಭೆ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶ ...

Published On :
ಬೆಂಗಳೂರು: ಪಕ್ಷದಿಂದ ಅಮಾನತುಗೊಂಡಿರುವ 7 ಬಂಡಾಯ ಶಾಸಕರಿಗೆ ಮಾರ್ಚ್ 23 ರಂದು ನಡೆಯುವ ರಾಜ್ಯ ಸಭೆ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶ ನೀಡದಂತೆ ನಿರ್ದೇಶನ ನೀಡಬೇಕು ಎಂದು ಇಬ್ಬರು ಜೆಡಿಎಸ್ ಶಾಸಕರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಮಾರ್ಚ್ 23 2018 ರಂದು ವಿಧಾಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್ ಬಂಡಾಯ ಶಾಸಕರಿಗೆ ಮತದಾನಕ್ಕೆ ಅವಕಾಶ ನೀಡದಂತೆ ವಿಧಾನಸಭೆ ಸ್ಪೀಕರ್ ಅವರಿಗೆ ನಿರ್ದೇಶನ ನೀಡಬೇಕೆಂದು ಹೈಕೋರ್ಟ್ ಗೆ ಮನವಿ ಸಲ್ಲಿಸಲಾಗಿದೆ,
ಜಮೀರ್ ಅಹಮದ್ ಖಾನ್, ಎನ್. ಚೆಲುವರಾಯ ಸ್ವಾಮಿ, ಎಚ್.ಸಿ ಬಾಲಕೃಷ್ಣ, ಎ.ಬಿ ರಮೇಶ್ ಬಂಡಿಸಿದ್ದೇಗೌಡ, ಇಕ್ಬಾಲ್ ಅನ್ಸಾರಿ, ಅಖಂಡ ಶ್ರೀನಿವಾಸ ಮೂರ್ತಿ, ಮತ್ತು ಭೀಮಾ ನಾಯಕ್ ಅವರಿಗೆ ಮತದಾನದ ಅವಕಾಶ ನೀಡಬಾರದೆಂದು ಶ್ರವಣಬೆಳಗೊಳ ಶಾಸಕ ಸಿ.ಎನ್ ಬಾಲಕೃಷ್ಣ, ಮುದಿಗೆರೆ ಶಾಸಕ ಬಿ.ಬಿ ನಿಂಗಯ್ಯ ಹೈಕೋರ್ಟ್ ಮೊರೆ ಹೋಗಿದ್ದಾರೆ. ಈ ಸಂಬಂಧ ಜಸ್ಟೀಸ್ ರಾಘವೇಂದ್ರ ಎಸ್ ಚೌಹಾಣ್ ಮಂಗಳವಾರ ಅರ್ಜಿ ವಿಚಾರಣೆ ನಡೆಸಲಿದ್ದಾರೆ.
2016ರ ಜೂನ್ 11 ರಂದು ನಡೆದಿದ್ದ ರಾಜ್ಯಸಭೆ ಚುನಾವಣೆ ವೇಳೆ ಜೆಡಿಎಸ್ ಅಭ್ಯರ್ಥಿ ಎಂ ಪಾರೂಕ್ ಅವರಿಗೆ ಎಲ್ಲಾ ಶಾಸಕರು ಮತ ಚಲಾಯಿಸುವಂತೆ ಪಕ್ಷ ವಿಪ್ ನೀಡಿತ್ತು, ಆದರೆ ವಿಪ್ ಉಲ್ಲಂಘನೆ ಮಾಡಿದ್ದ 7 ಶಾಸಕರು ಬೇರೆ ಪಕ್ಷದ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದರು. ಈ ಹಿನ್ನೆಲೆಯಲ್ಲಿ 7 ಶಾಸಕರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು,
ಈಗ ಮತ್ತೆ ರಾಜ್ಯಸಭೆ ಚುನಾವಣೆ ಎದುರಾಗಿದ್ದು ಈ 7 ಶಾಸಕರು ಬೇರೆ ಪಕ್ಷಕ್ಕೆ ಮತ ಚಲಾವಣೆ ಮಾಡಲಿದ್ದಾರೆ ಹೀಗಾಗಿ ಅವರಿಗೆ ಮತ ಚಲಾಯಿಸದಂತೆ ಸೂಚನೆ ನೀಡಬೇಕೆಂದು ಮನವಿ ಮಾಡಿದ್ದಾರೆ.
ಶಾಸಕರ ಸದಸ್ಯತ್ವ ಅನರ್ಹತೆ ಕುರಿತು ಜೆಡಿಎಸ್ ಮತ್ತು ಬಂಡಾಯ ಶಾಸಕರ ವಾದ ಮತ್ತು ಪ್ರತಿವಾದ ಸ್ಪೀಕರ್ ಕೊಠಡಿಯಲ್ಲಿ ಸುಮಾರು ಒಂದು ಗಂಟೆ ಕಾಲ ನಡೆಯಿತು. ಈ ಸಂಬಂಧ ಸ್ಪೀಕರ್ ಕೋಳಿವಾಡ ಇಂದು ತಮ್ಮ ಆದೇಶ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


