ರಾಜಕೀಯ

ಎರಡು ಕ್ಷೇತ್ರಗಳಲ್ಲಿ ಎಚ್ ಡಿಕೆ ಸ್ಪರ್ಧೆಗೆ ಜೆಡಿಎಸ್ ಕಾರ್ಯಕರ್ತರ ವಿರೋಧ

ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಲು ಮುಂದಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ....

ಎರಡು ಕ್ಷೇತ್ರಗಳಲ್ಲಿ ಎಚ್ ಡಿಕೆ ಸ್ಪರ್ಧೆಗೆ ಜೆಡಿಎಸ್ ಕಾರ್ಯಕರ್ತರ ವಿರೋಧ
ಎಚ್ ಡಿ ಕುಮಾರಸ್ವಾಮಿ
Published On :
ರಾಮನಗರ: ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಲು ಮುಂದಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪಕ್ಷದ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಇಂದು ರಾಮನಗರದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ, ತಾವು ರಾಮನಗರ ಮತ್ತು ಚನ್ನಪಟ್ಟಣ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸುವುದಾಗಿ‌ ಘೋಷಿಸಿದರು.
ಕುಮಾರಸ್ವಾಮಿ ಅವರ ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಪಕ್ಷದ ಕಾರ್ಯಕರ್ತರು. ರಾಮನಗರದಿಂದ ಮಾತ್ರ ಸ್ಪರ್ಧಿಸುವಂತೆ ಒತ್ತಾಯ‌ ಮಾಡಿದರು.
ಕಾರ್ಯಕರ್ತರ ಒತ್ತಾಯಕ್ಕೆ ಮಣಿದ ಕುಮಾರಸ್ವಾಮಿ, ಇನ್ನೆರಡು ದಿನಗಳಲ್ಲಿ ಮತ್ತೆ ಕಾರ್ಯಕರ್ತರೊಂದಿಗೆ ಚರ್ಚಿಸಿ ಅಂತಿಮ‌ ತೀರ್ಮಾನ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.