ರಾಹುಲ್ ಗಾಂಧಿ ಬಂದಾಯ್ತು, ಸಿದ್ದರಾಮಯ್ಯ ಹೋಗುತ್ತಾರೆ: ಮುರಳಿಧರ ರಾವ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನ ಬಿಟ್ಟುಕೊಡಬೇಕಾದ ಸಮಯ ಬಂದಿದೆ ಎಂದ ಬಿಜೆಪಿ...

Published On :
ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನ ಬಿಟ್ಟುಕೊಡಬೇಕಾದ ಸಮಯ ಬಂದಿದೆ ಎಂದ ಬಿಜೆಪಿ ರಾಜ್ಯ ಉಸ್ತುವಾರಿ ಮುರಳಿಧರ ರಾವ್ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ತುಮಕೂರಿನಲ್ಲಿ ಬಿಜೆಪಿಯ ಗೊಲ್ಲ ಸಮಾವೇಶದಲ್ಲಿ ಮಾತನಾಡಿದ ಮುರಳಿಧರ ರಾವ್ ಅವರು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಬಂದಾಯ್ತು. ಹೀಗಾಗಿ ಶೀಘ್ರದಲ್ಲೇ ಸಿದ್ದರಾಮಯ್ಯ ಹೋಗಲಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಅವರು ಕಳೆದ ಐದು ವರ್ಷಗಳಿಂದ ನಿದ್ದೆ ಮಾಡುತ್ತಿದ್ದರು. ಈಗ ಎಚ್ಚೆತ್ತುಕೊಂಡಿರುವ ಸಿಎಂ ಕಾರಿನಲ್ಲಿ ಕಲ್ಲು ತೆಗೆದುಕೊಂಡು ಹೋಗಿ ಶಂಕುಸ್ಥಾಪನೆ ಮಾಡುತ್ತಿದ್ದಾರೆ ಎಂದು ರಾವ್ ವ್ಯಂಗ್ಯವಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅಭಿವೃದ್ಧಿ ಮಾಡಬೇಕಾದ ಸಮಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ಈಗ ನವ ಕರ್ನಾಟಕ ನಿರ್ಮಾಣ ಮಾಡುವುದಾಗಿ ಹೇಳುತ್ತಿದ್ದಾರೆ ಎಂದು ಟೀಕಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


