ರಾಜಕೀಯ

ವಿಧಾನಸಭೆ ಚುನಾವಣೆಯಲ್ಲಿ ಯಾದವ ಸಮುದಾಯದ ಮೂವರಿಗೆ ಬಿಜೆಪಿ ಟಿಕೆಟ್: ಬಿಎಸ್ ವೈ ಭರವಸೆ

ರಾಜ್ಯದಲ್ಲಿ 35 ಲಕ್ಷ ಜನಸಂಖ್ಯೆ ಹೊಂದಿರುವ ಗೊಲ್ಲ(ಯಾದವ) ಸಮುದಾಯದ ಮೂವರಿಗೆ ಬಿಜೆಪಿ ಟಿಕೆಟ್....

ವಿಧಾನಸಭೆ ಚುನಾವಣೆಯಲ್ಲಿ ಯಾದವ ಸಮುದಾಯದ ಮೂವರಿಗೆ ಬಿಜೆಪಿ ಟಿಕೆಟ್: ಬಿಎಸ್ ವೈ ಭರವಸೆ
ಯಾದವ್ ಸಮಾವೇಶದಲ್ಲಿ ಬಿಎಸ್ ಯಡಿಯೂರಪ್ಪಗೆ ಸನ್ಮಾನ
Published On :
ತುಮಕೂರು: ರಾಜ್ಯದಲ್ಲಿ 35 ಲಕ್ಷ ಜನಸಂಖ್ಯೆ ಹೊಂದಿರುವ ಗೊಲ್ಲ(ಯಾದವ) ಸಮುದಾಯದ ಮೂವರಿಗೆ ಬಿಜೆಪಿ ಟಿಕೆಟ್ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಶುಕ್ರವಾರ ಭರವಸೆ ನೀಡಿದ್ದಾರೆ.
ಇಂದು ತುಮಕೂರಿನಲ್ಲಿ ರಾಜ್ಯ ಮಟ್ಟದ ಯಾದವ ಸಮಾವೇಶ ಉದ್ದೇಶಿಸಿ ಮಾತನಾಡಿದ ಬಿಎಸ್ ವೈ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ತುಮಕೂರು ಮತ್ತು ಬೆಳಗಾವಿಯಲ್ಲಿ ಯಾದವ ಜನಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ. ಯಾವದ ಜನತೆ ಒಟ್ಟಾಗಿ ಬಿಜೆಪಿಯನ್ನು ಬಲಪಡಿಸಬೇಕು ಎಂದು ಕರೆ ನೀಡಿದರು.
ನಿಮ್ಮ ಸಮುದಾಯದ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವುದರ ಜತೆಗೆ ಇತರೆ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕೃಷ್ಣ ಯಾದವಾನಂದ ಮಠಕ್ಕೆ 1 ಕೋಟಿ ರುಪಾಯಿ ನೀಡುವುದಾಗಿ ಹಾಗೂ ಯಾದವ ಸಮುದಾಯವನ್ನು ಎಸ್ಸಿ/ಎಸ್ಟಿಗೆ ಸೇರಿಸುವುದಾಗಿ  ಮಾಜಿ ಸಿಎಂ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.