ಬೆಂಗಳೂರು: ರಾಜೀನಾಮೆ ಸಲ್ಲಿಸಿದ 4 ಜೆಡಿಎಸ್ ಬಂಡಾಯ ಶಾಸಕರು
ಜೆಡಿಎಸ್ ನಾಯಕತ್ವದ ವಿರುದ್ಧ ಸಿಡಿದೆದ್ದಿರುವ ಏಳು ಜನ ಬಂಡಾಯ ಶಾಸಕರ ಪೈಕಿ ನಾಲ್ಕು ಶಾಸಕರು ಸ್ಪೀಕರ್ ಕೆ.ಬಿ. ಕೋಳಿವಾಡ ಅವರನ್ನು ಭೇಟಿ ಮಾಡಿ ...

Published On :
ಬೆಂಗಳೂರು: ಜೆಡಿಎಸ್ ನಾಯಕತ್ವದ ವಿರುದ್ಧ ಸಿಡಿದೆದ್ದಿರುವ ಏಳು ಜನ ಬಂಡಾಯ ಶಾಸಕರ ಪೈಕಿ ನಾಲ್ಕು ಶಾಸಕರು ಸ್ಪೀಕರ್ ಕೆ.ಬಿ. ಕೋಳಿವಾಡ ಅವರನ್ನು ಭೇಟಿ ಮಾಡಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಶಾಸಕರಾದ ಚಲುವರಾಯಸ್ವಾಮಿ, ಭೀಮಾನಾಯ್ಕ್, ಜಮೀರ್ಅಹಮದ್ಖಾನ್ಮತ್ತು ಅಖಂಡ ಶ್ರೀನಿವಾಸಮೂರ್ತಿ ಸ್ಪೀಕರ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಎಚ್.ಸಿ. ಬಾಲಕೃಷ್ಣ ಮತ್ತು ಇಕ್ಬಾಲ್ಅನ್ಸಾರಿ ಅವರು ಇಂದು ಮಧ್ಯಾಹ್ನ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.
ರಮೇಶ್ ಬಂಡೀಸಿದ್ದೇಗೌಡ ಅವರು ಶುಕ್ರವಾರ ಸಂಜೆಯೇ ಸ್ಪೀಕರ್ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದರು. ನಾಲ್ಕು ಶಾಸಕರು ರಾಜೀನಾಮೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸ್ಪೀಕರ್, ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ತಿಳಿಸಿದರು. ರಮೇಶ್ ಬಂಡೀಸಿದ್ದೇಗೌಡ ಅವರ ರಾಜೀನಾಮೆ ಸಹ ಅಂಗೀಕಾರವಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ResignJDSರಾಜಿನಾಮೆಜೆಡಿಎಸ್ಜಮೀರ್ ಅಹಮದ್ ಖಾನ್ಚಲುವರಾಯ ಸ್ವಾಮಿChaluvaraya SwamiAkhand Srinivas MurthyZamir Ahmed Khanಅಖಂಡ ಶ್ರೀನಿವಾಸ ಮೂರ್ತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


