ರಾಜಕೀಯ

ವಿಧಾನಸಭಾ ಚುನಾವಣೆ: ಸಿಎಂ ಸಿದ್ದರಾಮಯ್ಯ ಸೇಫ್, 20 ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ

ವಿಧಾನಸಭೆ ಚುನಾವಣೆ ಹತ್ತಿರಬರುತ್ತಿದ್ದು, ಆಡಳಿತಾರೂಢ ಪಕ್ಷ ಹಾಗೂ ಪ್ರತಿ ಪಕ್ಷಗಳು ಚುನಾವಣೆಗೆ ಭಾರೀ ಸಿದ್ಧತೆಗಳನ್ನು ನಡೆಸುತ್ತಿದೆ. ಈ ನಡುವೆ ಕಾಂಗ್ರೆಸ್ ಪಕ್ಷದ ಶಾಸಕರ ಟಿಕೆಟ್'ಗೆ ಅಧಿಕಾರ ವಿರೋಧಿ ಅಂಶಗಳು ಕುತ್ತಾಗಿ ಪರಿಣಮಿಸುವ ಸಾಧ್ಯತೆಗಳಿವೆ ಎಂದು ಹೇಳಾಗುತ್ತಿದೆ...

ವಿಧಾನಸಭಾ ಚುನಾವಣೆ: ಸಿಎಂ ಸಿದ್ದರಾಮಯ್ಯ ಸೇಫ್, 20 ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ
ಮುಖ್ಯಮಂತ್ರಿ ಸಿದ್ದರಾಮಯ್ಯ
Published On :
ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರಬರುತ್ತಿದ್ದು, ಆಡಳಿತಾರೂಢ ಪಕ್ಷ ಹಾಗೂ ಪ್ರತಿ ಪಕ್ಷಗಳು ಚುನಾವಣೆಗೆ ಭಾರೀ ಸಿದ್ಧತೆಗಳನ್ನು ನಡೆಸುತ್ತಿದೆ. ಈ ನಡುವೆ ಕಾಂಗ್ರೆಸ್ ಪಕ್ಷದ ಶಾಸಕರ ಟಿಕೆಟ್'ಗೆ ಅಧಿಕಾರ ವಿರೋಧಿ ಅಂಶಗಳು ಕುತ್ತಾಗಿ ಪರಿಣಮಿಸುವ ಸಾಧ್ಯತೆಗಳಿವೆ ಎಂದು ಹೇಳಾಗುತ್ತಿದೆ. 
ಅಧಿಕಾರ ವಿರೋಧಿ ಅಂಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಚಾವ್ ಆಗಲಿದ್ದು, 20 ಶಾಸಕರಿಗೆ ಇದು ಕುತ್ತಾಗಿ ಪರಿಣಮಿಸಲಿದೆ.  ಆಡಳಿತಾರೂಢ ಕಾಂಗ್ರೆಸ್ ಪಕ್ಷದ 20 ಶಾಸಕರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕಳೆದುಕೊಳ್ಳುವ ಸಾಧ್ಯತೆಗಳಿವೆ. ಪಕ್ಷದ ನಡೆಸಿರುವ 2 ಆಂತರಿಕ ಸಮೀಕ್ಷೆಗಳಲ್ಲಿ ಈ ಶಾಸಕರು ಸೋಲುವ ಸಾಧ್ಯತೆಗಳು ಹೆಚ್ಚಾಗಿ ಕಾಣಿಸಿದ ಹಿನ್ನಲೆಯಲ್ಲಿ ಟಿಕೆಟ್ ಕಳೆದುಕೊಳ್ಳುವ ಸಾಧ್ಯಗಳಿವೆ ಎಂದು ಹೇಳಲಾಗುತ್ತಿದೆ. 
ವರದಿಯನ್ನು ಹೈಕಮಾಂಡ್ ಇದೀಗ ಪರಿಶೀಲನೆ ನಡೆಸುತ್ತಿದ್ದು, ಟಿಕೆಟ್ ನೀಡುವ ಕುರಿತು ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ, 20 ಶಾಸಕರಿಗೆ ಟಿಟೆಕ್ ಕೈತಪ್ಪುವ ಸಾಧ್ಯತೆಗಳಿದ್ದು ಈ ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಕಾಂಗ್ರೆಸ್ ಮಣೆ ಹಾಕುವ ಲೆಕ್ಕಾಚಾರದಲ್ಲಿದೆ. 
ಈ ಕುರಿತಂತೆ ಕಾಂಗ್ರೆಸ್ ಹಿರಿಯ ನಾಯಕ ಪ್ರತಿಕ್ರಿಯೆ ನೀಡಿದ್ದು, ಅಧಿಕಾರ ವಿರೋಧಿ ಅಂಶ 20 ಶಾಸಕರ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. ಈ ಬಗ್ಗೆ ಪಕ್ಷಕ್ಕೆ ಮಾಹಿತಿಯಿದ್ದು, ಈ ಕುರಿತ ಅಂಶಗಳ ಬಗ್ಗೆ ಚಿಂತನೆ ನಡೆಸುತ್ತಿದೆ. ಪಕ್ಷದ ಅಭ್ಯರ್ಥಿಗಳನ್ನು ಬದಲಿಸುವುದು ಸುಲಭವಲ್ಲ. ಅಭ್ಯರ್ಥಿಗಳನ್ನು ಬದಲಿಸುವಾಗ ಅವರಿಗಿಂತಲೂ ಉತ್ತಮವಾದ ಅಭ್ಯರ್ಥಿಯನ್ನು ನೋಡಬೇಕು ಎಂದು ಹೇಳಿದ್ದಾರೆ. 
ಕಾಂಗ್ರೆಸ್ ಆಂತರಿಕ ಮೂಲಗಳು ಮಾಹಿತಿ ನೀಡಿರುವ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸರ್ಕಾರ 120 ಸೀಟುಗಳನ್ನು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದೆ. ಆದರೆ, ವ್ಯಕ್ತಿಗತವಾಗಿ ಅಭ್ಯರ್ಥಿಗಳನ್ನು ನೋಡಿದಾಗ ಸಂಖ್ಯೆ ಕಡಿಮೆಯಾಗುವ ಸಾಧ್ಯತೆಗಳಿವೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ, ಸರ್ಕಾರ ರಚನೆ ಮಾಡಲು ಕಾಂಗ್ರೆಸ್ 113 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಅಗತ್ಯವಿದೆ. ಹೀಗಾಗಿ ಜಾತಿ ಅಥವಾ ಇನ್ನಿತರೇ ಯಾವುದೇ ಅಂಶಗಳನ್ನು ಪರಿಗಣಸದೆ ಗೆಲ್ಲುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಲು ಕಾಂಗ್ರೆಸ್ ನಿರ್ಧರಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸ್ಪಷ್ಟವಾಗಿ ಹೇಳಿದ್ದಾರೆಂದು ಹೇಳಿದೆ. 
ಈ ಬಗ್ಗೆ ಸ್ಪಷ್ಟ ಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರು, ವ್ಯವಸ್ಥಿತ ವಿಧಾನವನ್ನು ಪಕ್ಷ ಅನುಸರಿಸುತ್ತದೆ. ಅಭ್ಯರ್ಥಿಗಳ ಆಯ್ಕೆ ಸಂದರ್ಭದಲ್ಲಿ ಸ್ಥಳೀಯ ಪಕ್ಷಗಳು, ಘಟಕಗಳು ಪ್ರತಿಕ್ರಿಯೆ ಸೇರಿದಂತೆ ಎಲ್ಲಾ ಅಂಶಗಳನ್ನು ಪರಿಗಣಿಸಲಾಗುತ್ತದೆ. ಯಾರು ಹೆಚ್ಚು ಗೆಲವು ಸಾಧಿಸುತ್ತಾರೆ, ಯಾರು ಸಾಧಿಸುವುದಿಲ್ಲ ಎಂಬುದನ್ನು ಕಂಡು ಹಿಡಿಯುವುದು ಕಷ್ಟ. ಹೀಗಾಗಿ ಇರುವ ಅಭ್ಯರ್ಥಿಗಳಲ್ಲಿಯೇ ಪರಿಶೀಲನೆ ನಡೆಸುತ್ತಿದ್ದೇವೆ. ಸೋಲು ಕಾಣುವ ಅಭ್ಯರ್ಥಿಗಳಿಗೇಕೆ ಟಿಕೆಟ್ ನೀಡಬೇಕು. ಗೆಲವು ಸಾಧಿಸುವುದೇ ಪ್ರಮುಖ ಧ್ಯೇಯವಾಗಿರುತ್ತದೆ ಎಂದು ಹೇಳಿದ್ದಾರೆ. 
ಕೃಷಿ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಟಿಕೆಟ್ ನೀಡಲಿಲ್ಲ ಎಂದಾಕ್ಷ ನಾಯಕರಿಗೆ ಯಾವುದೇ ನಷ್ಟವಾಗುವುದಿಲ್ಲ. ಸರ್ಕಾರದ ವಿರುದ್ಧ ಯಾವುದೇ ರೀತಿಯ ಅಧಿಕಾರ ವಿರೋಧಿ ಮನೋಭಾವನೆಗಳಿಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲವು ಸಾಧಿಸಬೇಕೆಂದು ಪ್ರತೀಯೊಬ್ಬರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಅಭಿವೃದ್ಧಿ ಧ್ಯೇಯದೊಂದಿಗೆ ನಾವು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇವೆ. ಆದರೆ, ಬಿಜೆಪಿ ಇದನ್ನು ಕೋಮುವಾದಿ ವಿಚಾರ ಮಾಡಲು ಹೊರಟಿದೆ. ನಮ್ಮದು ಅಸಾಧಾರಣ ಚುನಾವಣೆಯಾಗಿದ್ದು, ಪಕ್ಷ ಹಾಗೂ ಪಕ್ಷದ ನಾಯರು ಎಂದಿಗೂ ಆಕ್ರಮಣಕಾರಿಯಾಗಿಲ್ಲ. ಬಿಜೆಪಿಗೆ ತಿರುಗೇಟು ನೀಡಲು ಸಾಮಾಜಿಕ ಜಾಲತಾಣಗಳಲ್ಲೂ ನಾವು ಉತ್ತಮ ತಂಡವನ್ನು ಹೊಂದಿದ್ದೇವೆಂದು ಹೇಳಿದ್ದಾರೆ. 
ಮತ್ತೆ ಅಧಿಕಾರಕ್ಕೆ ಬಂದರೆ ಮತ್ತೆ ಸಿದ್ದರಾಮಯ್ಯ ಅವರೇ ರಾಜ್ಯದ ಮುಖ್ಯಮಂತ್ರಿ
ಸಿದ್ದರಾಮಯ್ಯ ಅವರ ನಾಯಕತ್ವದ ಅಡಿಯಲ್ಲಿ ಕಾಂಗ್ರೆಸ್ ಚುನಾವಣೆಯಲ್ಲಿ ಸ್ಪರ್ಧೆಗಿಳಿಯುತ್ತಿದೆ. ಆದರೆ, ಪಕ್ಷ ಎಂದಿಗೂ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಸಿದ್ದರಾಮಯ್ಯ ಅವರೇ ಎಂದು ಎಲ್ಲಿಗೂ ಘೋಷಣೆ ಮಾಡಿಲ್ಲ. ಆದರೆ, ಪಕ್ಷದ ಹೈ ಕಮಾಂಡ್ ಮತ್ತೆ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆಂದು ಸ್ಪಷ್ಟಪಡಿಸಿದೆ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿದೆ. 
ಪಕ್ಷದ ನಿರ್ಧಾರದ ಬಗ್ಗೆ ಪ್ರತೀಯೊಬ್ಬರಿಗೂ ಮಾಹಿತಿ ನೀಡಲಾಗಿತ್ತು. ಇದಕ್ಕೆ ಯಾರೊಬ್ಬರೂ ವಿರೋಧ ವ್ಯಕ್ತಪಡಿಸಿಲಿಲ್ಲ. ಪಕ್ಷದ ಗೆಲವಿಗಾಗಿ ಪ್ರತೀಯೊಬ್ಬರು ಶ್ರಮ ಪಡುತ್ತಿದ್ದಾರೆಂದು ತಿಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.