ರಾಜಕೀಯ

ಸಿದ್ದರಾಮಯ್ಯ ಲಿಂಗಾಯಿತ ತಂತ್ರಕ್ಕೆ ಕೌಂಟರ್ ಕೊಡಲು ರಾಜ್ಯಕ್ಕೆ ಆಗಮಿಸಿದ ಅಮಿತ್ ಶಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡಾ ರಾಜ್ಯಕ್ಕೆ ಆಗಮಿಸಿದ್ದಾರೆ.ಬೆಳಿಗ್ಗೆ ತುಮಕೂರಿಗೆ ಆಗಮಿಸಿದ ಅಮಿತ್ ಶಾ, ನೇರವಾಗಿ ಸಿದ್ದಗಂಗಾ ಮಠಕ್ಕೆ ತೆರಳಿ ಸ್ವಾಮೀಜಿಗಳ ದರ್ಶನ ಪಡೆದಿದ್ದಾರೆ

ಸಿದ್ದರಾಮಯ್ಯ ಲಿಂಗಾಯಿತ ತಂತ್ರಕ್ಕೆ ಕೌಂಟರ್ ಕೊಡಲು ರಾಜ್ಯಕ್ಕೆ ಆಗಮಿಸಿದ ಅಮಿತ್ ಶಾ
ಅಮಿತ್ ಶಾ
Published On :

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಾಲ್ಕನೇ ಹಂತದ ಜನಾಶೀರ್ವಾದ ಯಾತ್ರೆ ನಡೆಸುತ್ತಿರುವ ಬೆನ್ನಲ್ಲೇ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡಾ ರಾಜ್ಯಕ್ಕೆ ಆಗಮಿಸಿದ್ದಾರೆ.

ಬೆಳಿಗ್ಗೆ ತುಮಕೂರಿಗೆ ಆಗಮಿಸಿದ ಅಮಿತ್ ಶಾ, ನೇರವಾಗಿ ಸಿದ್ದಗಂಗಾ ಮಠಕ್ಕೆ ತೆರಳಿ ಸ್ವಾಮೀಜಿಗಳ ದರ್ಶನ ಪಡೆದಿದ್ದಾರೆ.ಸಿದ್ಧಗಂಗಾ ಮಠದಲ್ಲಿ ನಡೆದಾಡುವ ದೇವರು ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದ ಪಡೆದೆನು. ಈ ವಯಸ್ಸಿನಲ್ಲೂ ಅವರು ಮಾಡುತ್ತಿರುವ ನಿರಂತರ ಕಾಯಕ ಅತ್ಯಂತ ಸ್ಫೂರ್ತಿದಾಯಕ. ಅವರ ಜೀವನವೇ ನಮಗೆ ಪಾಠ ಎಂದು ಹೇಳಿದ್ದಾರೆ.

ಅಮಿತ್ ಶಾ ಸಿದ್ದಗಂಗಾ ಮಠದ ಶ್ರೀಗಳನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ನಾನಾ ವಿಶ್ಲೇಷಣೆಗಳಿಗೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲಿಂಗಾಯತ ತಂತ್ರಕ್ಕೆ ಪ್ರತಿತಂತ್ರ ರೂಪಿಸುವ ಸಲುವಾಗಿಯೇ  ಅಮಿತ್ ಶಾ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.