ರಾಜಕೀಯ

ಅವಿಶ್ವಾಸ ನಿರ್ಣಯ ಮಂಡನೆ ಎದುರಿಸಲು ಮೋದಿ ಸರ್ಕಾರ ಭಯ: ರಾಹುಲ್ ವ್ಯಂಗ್ಯ

ಕೇಂದ್ರ ಸರ್ಕಾರದ ವಿರುದ್ಧ ಮಂಡಿಸಲಿರುವ ಅವಿಶ್ವಾಸ ನಿರ್ಣಯವನ್ನು ಎದುರಿಸಲು ಮೋದಿ ಭಯಗೊಂಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ...

ಅವಿಶ್ವಾಸ ನಿರ್ಣಯ ಮಂಡನೆ ಎದುರಿಸಲು ಮೋದಿ ಸರ್ಕಾರ ಭಯ: ರಾಹುಲ್ ವ್ಯಂಗ್ಯ
ಮೈಸೂರು ಸಮಾವೇಶದಲ್ಲಿ ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ
Published On :
ಮೈಸೂರು:  ಕೇಂದ್ರ ಸರ್ಕಾರದ ವಿರುದ್ಧ ಮಂಡಿಸಲಿರುವ ಅವಿಶ್ವಾಸ ನಿರ್ಣಯವನ್ನು ಎದುರಿಸಲು ಮೋದಿ ಭಯಗೊಂಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ,
ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ,ಸಂಸತ್ತಿನಲ್ಲಿ ವಿರೋಧ ಪಕ್ಷ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸಲಿದೆ ಎಂಬ ವಿಚಾರವನ್ನು ತಿಳಿದ  ಮೋದಿ ಸರ್ಕಾರ ಕಳೆದ 10 ದಿನಗಳಿಂದ ಭಯದಲ್ಲಿದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಲು ನಿರ್ಧರಿಸಿದ್ದು, ವೈಎಸ್ ಆರ್ ಸಿಪಿ ಮತ್ತು ಟಿಪಿಡಿಗಳು ಸಹ ಇದಕ್ಕೆ ಬೆಂಬಲ  ಸೂಚಿಸಿವೆ.
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಆಗ್ರಹಿಸುತ್ತಿರುವ ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಅವಿಶ್ವಾಸ ಗೊತ್ತುವಳಿ ಮಂಡಿಸುವ ನಿರೀಕ್ಷೆ ಇದ್ದು, ಅದಕ್ಕೆ ಆಂಧ್ರದ ಆಡಳಿತಾರೂಢ ತೆಲುಗುದೇಶಂ ಪಕ್ಷ ಎನ್‌ಡಿಎದಿಂದ ಹೊರಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.