ಬಿಎಸ್ ಯಡಿಯೂರಪ್ಪ ಸರ್ಕಾರ ಭ್ರಷ್ಟ ಎಂದು ಅಮಿತ್ ಶಾ ಸತ್ಯ ಹೇಳಿದ್ದಾರೆ: ಸಿದ್ದರಾಮಯ್ಯ
ಬಿಎಸ್ ಯಡಿಯೂರಪ್ಪ ಸರ್ಕಾರ ಭ್ರಷ್ಟ ಸರ್ಕಾರ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷರೇ ಹೇಳಿದ್ದಾರೆ. ಹಲವು ವರ್ಷಗಳ ನಂತರ ಅಮಿತ್ ಶಾ ಸತ್ಯ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ...

Published On :
ಬೆಂಗಳೂರು: ಬಿಎಸ್ ಯಡಿಯೂರಪ್ಪ ಸರ್ಕಾರ ಭ್ರಷ್ಟ ಸರ್ಕಾರ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷರೇ ಹೇಳಿದ್ದಾರೆ. ಹಲವು ವರ್ಷಗಳ ನಂತರ ಅಮಿತ್ ಶಾ ಸತ್ಯ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭಷ್ಟಾಚಾರದಲ್ಲಿ ಯಡಿಯೂರಪ್ಪ ಸರ್ಕಾರದ ನಂಬರ್ ಒನ್ ಎಂದು ಅಮಿತ್ ಶಾ ಹೇಳಿದ್ದು ಹಲವು ವರ್ಷಗಳ ನಂತರ ಶಾ ಸತ್ಯವನ್ನು ಹೇಳಿದ್ದಾರೆ. ಅದು ಎಲ್ಲರಿಗೂ ಗೊತ್ತಿರುವ ವಿಚಾರವೇ ಎಂದರು.
ಯಡಿಯೂರಪ್ಪ ಬಗ್ಗೆ ಸತ್ಯ ಹೇಳಿದಕ್ಕೆ ಸಂಪುಟದಿಂದ ಅಭಿನಂದನೆ ಸಲ್ಲಿಸೋಣ ಎಂದು ಸಿದ್ದರಾಮಯ್ಯ ಅವರು ತಮ್ಮ ಎಂದಿನ ಶೈಲಿಯಲ್ಲಿ ಹೇಳಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ ಅವರು, ಯಡಿಯೂರಪ್ಪ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ ಎಂದು ಇತ್ತೀಚಿಗೆ ನಿವೃತ್ತರಾಗಿರುವ ಸುಪ್ರೀಂಕೋರ್ಟ್ ನ್ಯಾಯಾಧೀಶರು ಹೇಳಿದ್ದಾರೆ ಎಂದು ಶಾ ಹೇಳಿದರು. ಶಾ ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Siddaramaiahಸಿದ್ದರಾಮಯ್ಯAmit ShahBS Yeddyurappaಅಮಿತ್ ಶಾಬಿಎಸ್ ಯಡಿಯೂರಪ್ಪKarnataka pollsಕರ್ನಾಟಕ ಚುನಾವಣೆMost Corruptಅತೀ ಭ್ರಷ್ಟ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


