ರಾಜಕೀಯ

ಕಾಂಗ್ರೆಸ್ ಜತೆ ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಸಾಧ್ಯತೆ!?

ಕಾಂಗ್ರೆಸ್ ನವರು ಒಪ್ಪಿ ಕರೆದರೇ ನಾವು ಮೈತ್ರಿಗೆ ಸಿದ್ಧ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ....

ಕಾಂಗ್ರೆಸ್ ಜತೆ  ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಸಾಧ್ಯತೆ!?
ದೇವೇಗೌಡ ಮತ್ತು ರಾಹುಲ್ ಗಾಂಧಿ
Published On :
ನವದೆಹಲಿ: ಕಾಂಗ್ರೆಸ್ ನವರು  ಒಪ್ಪಿ ಕರೆದರೇ ನಾವು ಮೈತ್ರಿಗೆ ಸಿದ್ಧ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಒಂದು ದೊಡ್ಡ ರಾಷ್ಟ್ರೀಯ ಪಕ್ಷ ಮತ್ತು ಜಾತ್ಯಾತೀತ ಅಂತಾ ಹೇಳಿಕೊಳ್ಳುತ್ತಿದೆ. ನಾವು ಪಕ್ಷದ ಹೆಸರಿನಲ್ಲಿಯೇ ಜಾತ್ಯಾತೀತವನ್ನು ಹೊಂದಿದ್ದೇವೆ. ಕಾಂಗ್ರೆಸ್ ನಮಗೆ ಎಷ್ಟು ಸೀಟ್ ಬಿಟ್ಟುಕೊಡುತ್ತವೆ ಹಾಗು ನಾವು ಅವರಿಗೆ ಎಷ್ಟು ಸೀಟ್ ಬಿಟ್ಟುಕೊಡುತ್ತೇವೆ ಎಂಬುದು ಅಲ್ಲಿಯೇ ನಿರ್ಣಯವಾಗಬೇಕಿದೆ ಅಂತಾ ದೇವೇಗೌಡರು ಹೇಳಿದ್ದಾರೆ.
ಕಾಂಗ್ರೆಸ್ ಜೊತೆಗಿನ ಮೈತ್ರಿ ಕೇವಲ ವ್ಯಂಗಕ್ಕಾಗಿ ಹೇಳಿದ್ದು, ಕರ್ನಾಟಕ ಸಂಘಟನೆ ಇಂದು ದೇವೇಗೌಡರನ್ನು ಭೇಟಿ ಮಾಡಿ ಬಿಜೆಪಿ ಸೋಲಿಸಲು ಜೆಡಿಎಸ್, ಕಾಂಗ್ರೆಸ್​ ಒಂದಾಗಬೇಕೆಂದು ಮನವಿ ಸಲ್ಲಿಸಿದರು. ಮನವಿಗೆ ಪ್ರತಿಕ್ರಿಯಿಸಿದ ದೇವೇಗೌಡರು ಕಾಂಗ್ರೆಸ್​ ದೊಡ್ಡ ಪಕ್ಷ, ಅವರೇ ಮೊದಲು ಪಟ್ಟಿ ಕಳುಹಿಸಲು, ಮೈತ್ರಿ ಪ್ರಸ್ತಾವನೆ ಬಂದರೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಸಮಾಜವಾದಿ ಪಕ್ಷ ಸೀಟು ಕೇಳಿದರೆ ಅವರಿಗೂ ಕೆಲವು ಸೀಟು ಬಿಟ್ಟುಕೊಡಲು ಸಿದ್ಧ. ನೀವೆಲ್ಲರೂ ಸದುದ್ದೇಶದಿಂದ ಇಲ್ಲಿಗೆ ಬಂದಿದ್ದೀರಿ, ಹೀಗಾಗಿ ನಿಮ್ಮ ಮನವಿಯನ್ನು ಪರಿಶೀಲಿಸುತ್ತೇನೆ ಎಂದು ದೇವೇಗೌಡರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.