ಕರ್ನಾಟಕ ವಿಧಾನಸಭಾ ಚುನಾವಣೆ; ಏ.3ಕ್ಕೆ ರಾಹುಲ್ ಗಾಂಧಿ ಶಿವಮೊಗ್ಗಕ್ಕೆ
ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯಗಳು ಚುರುಕುಗೊಳ್ಳುತ್ತಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಏ.3ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ...

Published On :
ಶಿವಮೊಗ್ಗ: ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯಗಳು ಚುರುಕುಗೊಳ್ಳುತ್ತಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಏ.3ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ. '
ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಅವರ ಬೃಹತ್ ರೋಡ್ ಶೋ ಬಳಿಕ ಕಾಂಗ್ರೆಸ್ ಕೂಡ ಅದ್ದೂರಿ ರೋಡ್ ಶೋ ನಡೆಸಲು ಸಿದ್ಧರತೆಗಳನ್ನು ನಡೆಸುತ್ತಿದೆ.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಿನ್ನೆ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಎಐಸಿಸಿ, ಕೆಪಿಸಿಸಿ ಮತ್ತು ಡಿಸಿಸಿ ಮುಖಂಡರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
ರಾಹುಲ್ ಅವರು ಏ.3 ರಂದು ಬೆಳಿಗ್ಗೆ 11.30ರ ಸುಮಾರಿಗೆ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಆಗಮಿಸಿ ಮಧ್ಯಾಹ್ನ 1.30ಕ್ಕೆ ಹೊನ್ನಾಳಿಗೆ ತೆರಳಲಿದ್ದಾರೆ. ಕೇವಲ 3 ಗಂಟೆ ಅವಧಿಯಲ್ಲಿ ತರಾತುರಿಯಲ್ಲ ರೋಡ್ ಶೋ ಮತ್ತು ಸಮಾವೇಶ ನಡೆಸಲು ಮುಖಂಡರುನಿರ್ಧರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Rahul Gandhiರಾಹುಲ್ ಗಾಂಧಿroadshowರೋಡ್ ಶೋಶಿವಮೊಗ್ಗShivamoggaಕರ್ನಾಟಕ ವಿಧಾನಸಭಾ ಚುನಾವಣೆKarnataka assembly polls
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


