ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧೆ, ಇದೇ ನನ್ನ ಕೊನೆ ಚುನಾವಣೆ: ಸಿಎಂ ಸಿದ್ದರಾಮಯ್ಯ
ಈ ಬಾರಿಯೂ ನಾನು ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಮತ್ತು ಇದು ನನ್ನ ಕೊನೆಯ ಚುನಾವಣೆ....

Published On :
ಮೈಸೂರು: ಈ ಬಾರಿಯೂ ನಾನು ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಮತ್ತು ಇದು ನನ್ನ ಕೊನೆಯ ಚುನಾವಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ತವರು ಜಿಲ್ಲೆ ಮೈಸೂರಿನಿಂದ ಇಂದು ಚುನಾವಣಾ ಪ್ರಚಾರ ಆರಂಭಿಸಿದ್ದು, ಅವರಿಗೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದ್ದಾರೆ.
ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಉದ್ಬೂರು ಗ್ರಾಮದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ನೂರಕ್ಕೆ ನೂರರಷ್ಟು ಈ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ. ನಾನು ಈ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಕೆಲವರು ಅಪ ಪ್ರಚಾರ ಮಾಡುತ್ತಿದ್ದಾರೆ. ಅದಕ್ಕೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.
ನನಗೆ ರಾಜಕೀಯವಾಗಿ ಮರು ಜನ್ಮ ಕೊಟ್ಟ ಕ್ಷೇತ್ರ ಚಾಮುಂಡೇಶ್ವರಿ. ಇದು ನನ್ನ ಕೊನೆಯ ಚುನಾವಣೆ. ಹೀಗಾಗಿ ಕೊನೆಯ ಚುನಾವಣೆಯನ್ನು ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಎದುರಿಸುತ್ತೇನೆ ಎಂದರು.
ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರೂ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದರು.
ಸಿದ್ದರಾಮಯ್ಯ ಅವರು ಇಂದಿನಿಂದ ಐದು ದಿನಗಳ ಕಾಲ ಮೈಸೂರು ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡೆಸಿ, ಕಾರ್ಯಕರ್ತರ ಜೊತೆ ಸರಣಿ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


