ರಾಜಕೀಯ

ಮೈಸೂರು ಅರಮನೆಯಲ್ಲಿ ಅಮಿತ್ ಶಾ, ರಾಜವಂಶಸ್ಥರ ಭೇಟಿ

ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಶುಕ್ರವಾರ ಮೈಸೂರು ಅರಮನೆಗೆ ಭೇಟಿ ನೀಡಿದ್ದಾರೆ.

ಮೈಸೂರು ಅರಮನೆಯಲ್ಲಿ ಅಮಿತ್ ಶಾ, ರಾಜವಂಶಸ್ಥರ ಭೇಟಿ
ಮೈಸೂರು ಅರಮನೆಯಲ್ಲಿ ಅಮಿತ್ ಶಾ
Published On :
ಮೈಸೂರು: ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಶುಕ್ರವಾರ ಮೈಸೂರು ಅರಮನೆಗೆ ಭೇಟಿ ನೀಡಿದ್ದಾರೆ. 
ಶುಕ್ರವಾರ ಬೆಳಗ್ಗೆ ಮೈಸೂರು ಅರಮನೆಗೆ ಆಗಮಸಿದ ಅಮಿತ್ ಶಾ ಮೈಸೂರು ರಾಜವಂಶಸ್ಥರನ್ನು ಭೇಟಿ ಮಾಡಿದರು, ರಾಜಮಾತೆ ಪ್ರಮೋದಾದೇವಿ ಒಡೆಯರ್​, ಮಹಾರಾಜ ಯದುವೀರ್​ ಒಡೆಯರ್​ ಜತೆ ಅಮಿತ್ ಶಾ ಮಾತುಕತೆ ನಡೆಸಿದರು. ಬಳಿಕ ಯದುವೀರ್​ ಒಡೆಯರ್​ ಮಗುವನ್ನು ಎತ್ತಿಕೊಂಡ ಅಮಿತ್ ಶಾ ಕೆಲಹೊತ್ತು ಆಟವಾಡಿಸಿದರು.
ಇದೇ ಮೊದಲ ಬಾರಿಗೆ ಮೈಸೂರು ಅರಮನೆಗೆ ಅಮಿತ್​ ಷಾ ಭೇಟಿ ನೀಡಿದ್ದು, ಅಲ್ಲಿನ ಸಿಬ್ಬಂದಿ ಷಾ ಅವರಿಗೆ ಕಮಲದ ಹೂವು ಕೊಟ್ಟು ಸ್ವಾಗತಿಸಿದ್ದು ವಿಶೇಷವಾಗಿತ್ತು. ಅಮಿತ್ ಶಾ ಅವರಿಗೆ ಕೇಂದ್ರ ಸಚಿವ ಅನಂತ್​ಕುಮಾರ್​, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸಂಸದ ಪ್ರತಾಪ್​ ಸಿಂಹ, ಶಾಸಕ ಸಿ.ಟಿ.ರವಿ ಮತ್ತಿತರ ನಾಯಕರು ಸಾಥ್ ನೀಡಿದ್ದರು. 
ಸುತ್ತೂರಿಗೆ ಭೇಟಿ
ಇದಕ್ಕೂ ಮೊದಲು ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ್ದ ಅಮಿತ್ ಶಾ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಸ್ವಾಮೀಜಿ ಷಾ ಅವರಿಗೆ ರುದ್ರಾಕ್ಷಿ ಮಾಲೆ ಹಾಕಿ ಆಶೀರ್ವದಿಸಿದರು. ನಂತರ ಸ್ವಾಮೀಜಿಗಳೊಂದಿಗೆ ಮಾತುಕತೆ ನಡೆಸಿದರು. ಕೇಂದ್ರ ಸಚಿವ ಅನಂತ್​ಕುಮಾರ್​, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಸಂಸದ ಪ್ರತಾಪ್​ಸಿಂಹ್​ ಇತರರು ಇದ್ದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.