ಅಮಿತ್ ಶಾಗೆ ಕೂಡ ನಾನೆಂದರೆ ಭಯ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗೆ ನನ್ನನ್ನು ಕಂಡರೆ ಭಯ. ಹೀಗಾಗಿ ನಾನು ಎಲ್ಲಿಯೋ ಹೋದರು ಹಿಂಬಾಲಿಸುತ್ತಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ...

Published On :
ಮೈಸೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗೆ ನನ್ನನ್ನು ಕಂಡರೆ ಭಯ. ಹೀಗಾಗಿ ನಾನು ಎಲ್ಲಿಯೋ ಹೋದರು ಹಿಂಬಾಲಿಸುತ್ತಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.
ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅಮಿತ್ ಶಾಗೆ ನನ್ನನ್ನು ಕಂಡರೆ ಭಯ. ಹೀಗಾಗಿಯೇ ನಾನು ಎಲ್ಲಿಯೇ ಹೋದರೂ ಹಿಂಬಾಲಿಸುತ್ತಾರೆ. ಅಮಿತ್ ಶಾ ಅವರು ಮಠಕ್ಕಾದರೂ ಹೋಗಲಿ, ಎಲ್ಲಿಗೆ ಬೇಕಾದರೂ ಹೋಗಲಿ, ಎಲ್ಲಿಗೆ ಬೇಕಾದರೂ ಹೋಗಲಿ. ಅದು ಅವರ ವೈಯಕ್ತಿಕ ಸ್ವಾತಂತ್ರ್ಯವಾಗಿದ್ದು, ಆ ಬಗ್ಗೆ ನಾನೂ ಏನನ್ನೂ ಹೇಳುವುದಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ತಮ್ಮನ್ನು ಅಹಿಂದೆ ಜರಿದಿದ್ದ ಅಮಿತ್ ಶಾ ಅವರು ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಅಮಿತ್ ಶಾ ಜೈನ ಧರ್ಮದವರು, ಅವರು ಹಿಂದೂವೇ ಅಥವಾ ಅಹಿಂದುವೇ ಎಂಬುದನ್ನು ಸ್ಪಷ್ಟಪಡಿಸಲಿ. ಉಪ ಚುನಾವಣೆಯಲ್ಲಿ ಯಡಿಯೂರಪ್ಪ ಸೇರಿ ಎಲ್ಲರೂ ಬಂದಿದ್ದರು. ಉಪ ಚುನಾವಣೆ ಮುಂದಿನ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿತ್ತು. ಆದರೆ, ಗೆದ್ದಿದ್ದು ಯಾರು ಎಂಬುದು ಇಡೀ ರಾಜ್ಯದ ಜನರಿಗೆ ಗೊತ್ತಿದೆ ಎಂದು ತಿಳಿಸಿದ್ದಾರೆ.
ಬಳಿಕ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲಾಗುತ್ತಿದೆ ಎಂಬ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಕುಮಾರಸ್ವಾಮಿಯವರ ಹೇಳಿಕೆಯನ್ನು ರಾಜಕೀಯ ಮಾಡುವ ಅಗತ್ಯವಿಲ್ಲ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುತ್ತಿಲ್ಲ ಎಂದು ಅವರು ವದಂತಿಗಳನ್ನು ಹಬ್ಬಿಸುತ್ತಿದ್ದಾರೆಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


