ಬಿಜೆಪಿ ಸೋಲಿಸುವುದೇ ನಮ್ಮ ಪ್ರಮುಖ ಗುರಿ: ಶರದ್ ಯಾದವ್
ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವುದೇ ನಮ್ಮ ಮುಖ್ಯ ಗುರಿ ಎಂದು ಜೆಡಿಯು ಮುಖಂಡ ಶರದ್ ಯಾದವ್ ...

Published On :
ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವುದೇ ನಮ್ಮ ಮುಖ್ಯ ಗುರಿ ಎಂದು ಜೆಡಿಯು ಮುಖಂಡ ಶರದ್ ಯಾದವ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಂದಿನ ಲೋಕಸಭೆ ಚುನಾವಣೆಗೆ ರಾಜ್ಯ ವಿಧಾನಸಭೆ ಚುನಾವಣೆ ಸೆಮಿಫೈನಲ್ ಇದ್ದಂತೆ, ಇಲ್ಲಿ ಬಿಜೆಪಿ ಸೋಲಿಸುವುದೇ ನಮ್ಮ ಗುರಿ' ಎಂದು ತಿಳಿಸಿದ್ದಾರೆ.
'ಕರ್ನಾಟಕದ ಚುನಾವಣೆಯನ್ನು ಇಡೀ ದೇಶದ ಜನ ನೋಡುತ್ತಿದ್ದಾರೆ. ದೇಶದಲ್ಲಿ ಬಿಜೆಪಿಯನ್ನು ಹೊಡೆದೋಡಿಸಬೇಕು. ಬಿಜೆಪಿ ಮುಕ್ತ ಭಾರತ ಮಾಡಬೇಕು. ಅದಕ್ಕಾಗಿಯೇ ರಾಜ್ಯಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾರೆ. .
'ಕಾಂಗ್ರೆಸ್ ಬೆಂಬಲಿಸಬೇಕೋ, ಜೆಡಿಎಸ್ ಬೆಂಬಲಿಸಬೇಕೊ ಎಂಬುದರ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಎರಡು ದಿನ ಇಲ್ಲೇ ಇರುತ್ತೇನೆ. ಪಕ್ಷದ ಕಾರ್ಯಕರ್ತರ ಜತೆ ಚರ್ಚಿಸಿ ಮಾಧ್ಯಮಗಳಿಗೆ ತಿಳಿಸುತ್ತೇನೆ ಎಂದು ವಿವರಿಸಿದ್ದಾರೆ.
ಈ ಹಿಂದೆ ಕರ್ನಾಟಕದಲ್ಲಿ ಪಕ್ಷ ಪ್ರಬಲವಾಗಿರಲಿಲ್ಲ, ರಾಜ್ಯದ ಎಲ್ಲಾ ಭಾಗಗಳ ಜನರ ಬೆಂಬಲದಿಂದಾಗಿ ಜೆಡಿಯು ಬಿಜೆಪಿ ಸೋಲಿಸಲು ಹೋರಾಟ ನಡೆಸುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿಜೆಡಿಯುಶರದ್ ಯಾದವ್Sharad yadavJanata Dal (United)Karnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


