ಯಡಿಯೂರಪ್ಪ ಅವರಿಗೆ ಎಲ್ .ಕೆ ಆಡ್ವಾಣಿ ಸ್ಥಿತಿ ಬರಲಿದೆ: ರಾಮಲಿಂಗಾರೆಡ್ಡಿ ಭವಿಷ್ಯ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಲ್ಲದೇ ಬಿ.ಎಸ್ ಯಡಿಯೂರಪ್ಪ ಪ್ರಚಾರ ನಡೆಸಿದರೇ ಕೇಂದ್ರದ ಹಿರಿಯ ನಾಯಕ ಎಲ್ ...

Published On :
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಲ್ಲದೇ ಬಿ.ಎಸ್ ಯಡಿಯೂರಪ್ಪ ಪ್ರಚಾರ ನಡೆಸಿದರೇ ಕೇಂದ್ರದ ಹಿರಿಯ ನಾಯಕ ಎಲ್ .ಕೆ ಆಡ್ವಾಣಿ ಅವರ ಸ್ಥಿತಿ ಬರಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಭವಿಷ್ಯ ನುಡಿದಿದ್ದಾರೆ.
ಪ್ರೆಸ್ ಕ್ಲಬ್ ನಲ್ಲಿ ಏರ್ಪಡಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನಸಭೆ ಚುನಾವಣಾ ಫಲಿತಾಂಶ ಬರುತ್ತಿದ್ದಂತೆಯೇ ಬಿಜೆಪಿಯಿಂದ ಯಡಿಯೂರಪ್ಪ ಅವರಿಗೆ ಗೇಟ್ ಪಾಸ್ ನೀಡಲಾಗುತ್ತದೆ. ಆಡ್ವಾಣಿ ಸ್ಥಿತಿಯೇ ಯಡಿಯೂರಪ್ಪ ಅವರಿಗೂ ಬರಲಿದೆ ಎಂದು ಹೇಳಿದ್ದಾರೆ.
ಯಡಿಯೂರಪ್ಪ ಅವರನ್ನು ಪ್ರಧಾನಿ ಮೋದಿ ಅವರ ರ್ಯಾಲಿಗಳಿಂದ ದೂರ ಇಡಲಾಗಿದೆ ಸಂಪೂರ್ಣವಾಗಿ ಯಡಿಯೂರಪ್ಪ ಅವರನ್ನು ನಿರ್ಲಕ್ಷಿಸಲಾಗುತ್ತಿದೆ, ಈ ಮೊದಲು ಮೋದಿ ರಾಜ್ಯದಲ್ಲಿ 15 ದಿನ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿತ್ತು, ಆದರೆ ಈಗ ಏದು 5 ದಿನಗಳಿಗೆ ಇಳಿದಿದೆ. ಹೀಗಾಗಿ ಚುನಾವಣೆಗೂ ಮುನ್ನವೇ ತಾನು ಗೆಲ್ಲುವ ನಂಬಿಕೆ ಕಳೆದುಕೊಂಡಿದೆ ಎಂಬುದನ್ನು ತೋರಿಸಿದೆ ಎಂದು ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Ramalinga Reddyರಾಮಲಿಂಗಾ ರೆಡ್ಡಿYeddyurappaಯಡಿಯೂರಪ್ಪL K Advaniಎಲ್Karnataka Assembly Electionಕರ್ನಾಟಕ ವಿಧಾನ ಸಭೆ ಚುನಾವಣೆಕೆ ಅಡ್ವಾಣಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


