ಪ್ರಧಾನಿ ಮೋದಿ, ಯಡಿಯೂರಪ್ಪ ವಿರುದ್ಧ ನಿಂದನೀಯ ಪದ ಬಳಕೆ: ಆಯೋಗಕ್ಕೆ ಬಿಜೆಪಿ ದೂರು
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಭ್ಯರ್ಥಿ ಬಿಎಸ್ ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ವಿರುದ್ಧ ನಟ ಪ್ರಕಾಶ್ ರಾಜ್ ಹಾಗೂ ಗುಜರಾತ್ ಶಾಸಕ, ದಲಿತ..

Published On :
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಭ್ಯರ್ಥಿ ಬಿಎಸ್ ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ವಿರುದ್ಧ ನಟ ಪ್ರಕಾಶ್ ರಾಜ್ ಹಾಗೂ ಗುಜರಾತ್ ಶಾಸಕ, ದಲಿತ ಮುಖಂಡ ಜಿಗ್ನೇಶ್ ಮೇವಾನಿ ಬಹಿರಂಗ ಸಭೆಗಳಲ್ಲಿ ನಿಂದನೀಯ ಪದ ಬಳಕೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಮಾರಂಭಗಳಲ್ಲಿ ಮಾತನಾಡುತ್ತಿರುವ ಜಿಗ್ನೇಶ್ ಮೇವಾನಿ ಹಾಗೂ ಪ್ರಕಾಶ್ ರಾಜ್ ಮಾನನಷ್ಟ ಮತ್ತು ನಿಂದನೀಯ ಪದಗಳನ್ನು ಬಳಸುತ್ತಿದ್ದಾರೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಈ ಹಿಂದೆ ಜಿಗ್ನೇಶ್ ಮೇವಾನಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಬಂದರೆ ಅವರನ್ನು ಹಿಂದಕ್ಕೆ ಹೋಗಿ ಎಂದು ಹೇಳಿ ಎಂದು ಹೇಳಿದ್ದರು. ಇನ್ನು ರಾಜ್ಯದಲ್ಲಿ ಪ್ರಕಾಶ್ ರಾಜ್ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿbjpಬಿಜೆಪಿPrakash rajಪ್ರಕಾಶ್ ರಾಜ್Jignesh Mevaniಜಿಗ್ನೇಶ್ ಮೇವಾನಿKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


