ಸಿಎಂ ಬಹಿರಂಗ ಚರ್ಚೆಗೆ ಬರಲಿ: ಸಿದ್ದರಾಮಯ್ಯಗೆ ಶ್ರೀರಾಮುಲು ಪಂಥಾಹ್ವಾನ
ವಿಧಾನಸಭೆ ಚುನಾವಣೆಯ ಹೈ ವೋಲ್ಟೇಜ್ ಕ್ಷೇತ್ರವಾದ ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿಯ ಶ್ರೀರಾಮುಲು ,...

Published On :
ಬಾದಾಮಿ: ವಿಧಾನಸಭೆ ಚುನಾವಣೆಯ ಹೈ ವೋಲ್ಟೇಜ್ ಕ್ಷೇತ್ರವಾದ ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿಯ ಶ್ರೀರಾಮುಲು ಸವಾಲು ಹಾಕಿದ್ದಾರೆ. ಸ್ವಾತಂತ್ರ್ಯ ಬಳಿಕ ಕಾಂಗ್ರೆಸ್ ಸರ್ಕಾರದ ಹಗರಣ ಕುರಿತು ಬಹಿರಂಗ ಚರ್ಚೆಗೆ ಸಿಎಂ ಬರಲಿ. ಈ ವಿಚಾರದಲ್ಲಿ ಮೋದಿಯವರು ಚರ್ಚೆಗೆ ಬೇಡ ನಾನೇ ಬಹಿರಂಗ ಚರ್ಚೆಗೆ ಬರ್ತೀನಿ ಎಂದು ಸವಾಲು ಹಾಕಿದ್ದಾರೆ.
ಬಾದಾಮಿಯಲ್ಲಿ ಮಾತನಾಡಿದ ಶ್ರೀರಾಮುಲು ಮೋದಿ ಸರಕಾರ ಭ್ರಷ್ಟ ಸರಕಾರ ಎಂದು ಕರೆದ ಸಿಎಂಗೆ ಟಾಂಗ್ ನೀಡಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಆಡಳಿತದ ಭ್ರಷ್ಟಾಚಾರ ಬಯಲು ಮಾಡುವೆ ಎಂದು ಶ್ರೀರಾಮುಲು ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ. ದಾಖಲೆ ಸಮೇತ ಹಗರಣ ಚರ್ಚೆಗೆ ನಾನು ಸಿದ್ಧ. ಸಿದ್ದರಾಮಯ್ಯ ಬಹಿರಂಗ ಚರ್ಚೆಗೆ ಬರಲಿ ಎಂದು ಶ್ರೀರಾಮುಲು ಆಹ್ವಾನ ನೀಡಿದ್ದಾರೆ
ಸಿದ್ದರಾಮಯ್ಯ ಅಧಿಕಾರದಲ್ಲಿ ಇಲ್ಲದಾಗ ಅಹಂಕಾರ ಇರಲಿಲ್ಲ. ಆದರೆ, ಅಧಿಕಾರಕ್ಕೆ ಬಂದ ಬಳಿಕ ಸಿದ್ದರಾಮಯ್ಯಗೆ ಅಹಂಕಾರ ತಲೆಗೇರಿದೆ ಎಂದು ಶ್ರೀರಾಮುಲು ಸಿಎಂ ವಿರುದ್ಧ ಟೀಕೆ ಮಾಡಿದ್ದಾರೆ.
ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 150 ಸ್ಥಾನಗಳಲ್ಲಿ ಗೆಲ್ಲುವ ಗುರಿ ಹೊಂದಿದೆ. ಬಿಜೆಪಿ ಸರ್ಕಾರ ರಚನೆಯಾದ ನಂತರ ಕೃಷ್ಣ ಬಿ ಸ್ಕೀಮ್ ನೀರಾವರಿ ಯೋಜನೆಯನ್ನು ತ್ವರಿತಗೊಳಿಸಲಾಗುವುದು ಎಂದು ಅವರು ಹೇಳಿದರು.
ಇನ್ನು ಬಾದಾಮಿಯಲ್ಲಿ ನನ್ನ ಸ್ನೇಹಿತ ಜನಾರ್ದನ ರೆಡ್ಡಿ ನನ್ನ ಪರ ಪ್ರಚಾರ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯSriramuluಶ್ರೀರಾಮುಲುKarnataka Assembly Electionopen debateಬಹಿರಂಗ ಚರ್ಚೆ. ಕರ್ನಾಟಕ ವಿಧಾನ ಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


