ರಾಜಕೀಯ

ಈಗ ಲೋಕಾಯುಕ್ತ ಬಲಪಡಿಸುತ್ತೇವೆನ್ನುತ್ತಿರುವ ಕಾಂಗ್ರೆಸ್ 5 ವರ್ಷ ಕತ್ತೆ ಕಾಯುತ್ತಿತ್ತಾ: ಬಿ.ಎಸ್.ಯಡಿಯೂರಪ್ಪ

ಲೋಕಾಯುಕ್ತವನ್ನು ಈಗ ಬಲಪಡಿಸುತ್ತೇವೆಂದು ಹೇಳುತ್ತಿರುವ ಕಾಂಗ್ರೆಸ್, 5 ವರ್ಷಗಳ ಕಾಲ ಕತ್ತೆ ಕಾಯುತ್ತಿತ್ತಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಪ್ರಶ್ನೆ ಹಾಕಿದ್ದಾರೆ...

ಈಗ ಲೋಕಾಯುಕ್ತ ಬಲಪಡಿಸುತ್ತೇವೆನ್ನುತ್ತಿರುವ ಕಾಂಗ್ರೆಸ್ 5 ವರ್ಷ ಕತ್ತೆ ಕಾಯುತ್ತಿತ್ತಾ: ಬಿ.ಎಸ್.ಯಡಿಯೂರಪ್ಪ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ
Published On :
ಮೈಸೂರು: ಲೋಕಾಯುಕ್ತವನ್ನು ಈಗ ಬಲಪಡಿಸುತ್ತೇವೆಂದು ಹೇಳುತ್ತಿರುವ ಕಾಂಗ್ರೆಸ್, 5 ವರ್ಷಗಳ ಕಾಲ ಕತ್ತೆ ಕಾಯುತ್ತಿತ್ತಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಪ್ರಶ್ನೆ ಹಾಕಿದ್ದಾರೆ. 
ಚಾಮರಾಜನಗರ ಸಂತೇಮರಹಳ್ಳಿಯಲ್ಲಿ ನಡೆಸಲಾದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿರುವ ಅವರು, ಯಾವುದೇ ಸಮೀಕ್ಷೆಗಳ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆಗಳಿಲ್ಲ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದಾರೆ. 
ಜೆಡಿಎಸ್ ಪಕ್ಷದೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಳ್ಳುತ್ತದೆ ಎಂದು ಕೆಲವರು ಹೇಳುತ್ತಿದ್ದಾರೆ. ಈ ಸುದ್ದಿಗಳಿಗೆ ಸ್ಪಷ್ಟನೆ ನೀಡಲು ಇಚ್ಛಿಸುತ್ತೇನೆ, ನಾವು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಬಹುಮತ ಪಡೆದು ರಾಜ್ಯದಲ್ಲಿ ಸರ್ಕಾರ ರಚಿಸುತ್ತೇವೆಂದು ತಿಳಿಸಿದ್ದಾರೆ. 
ರಾಜ್ಯದಲ್ಲಿ ಬಿಜೆಪಿ ಅಲೆಯಿದ್ದು, 50ಕ್ಕಿಂತಲೂ ಹೆಚ್ಚು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ಸಾಧಿಸಲು ಸಾಧ್ಯವಿಲ್ಲ. ಬಿಜೆಪಿ 150 ಕ್ಷೇತ್ರಗಳಲ್ಲಿ ಗೆಲವು ಸಾಧಿಸಲಿದೆ. ಜೆಡಿಎಸ್ 25 ಕ್ಷೇತ್ರಗಳಲ್ಲಿ ಗೆಲವು ಸಾಧಿಸಲಿದೆ ಎಂದಿದ್ದಾರೆ. 
ಬಳಿಕ ರಾಹುಲ್ ಗಾಂಧಿಯವರನ್ನು ಪ್ರಧಾನಮಂತ್ರಿ ಮಾಡುತ್ತೇವೆಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಇದು ಸಿದ್ದರಾಮಯ್ಯ ಅವರ ಲಜ್ಜೆಗೆಟ್ಟ ಹೇಳಿಕೆ. ಪ್ರಧಾನಿ ಮೋದಿಯವರನ್ನು ಟೀಕೆ ಮಾಡುವುದನ್ನು ಮೊದಲು ಅವರು ನಿಲ್ಲಿಸಲಿ. ಲೋಕಾಯುಕ್ತವನ್ನು ಈಗ ಬಲಪಡಿಸುತ್ತೇನೆಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ. ಐದು ವರ್ಷಗಳ ಕಾಲ ರಾಜ್ಯದಲ್ಲಿ ಅಧಿಕಾರ ನಡೆಸಿದ್ದು, ಅಧಿಕಾರದಲ್ಲಿದ್ದ ಸಂದರ್ಭದಲ್ಲೇನೂ ಕತ್ತೆ ಕಾಯುತ್ತಿತ್ತಾ ಎಂದು ಏಕವಚನದಲ್ಲೇ ಪ್ರಶ್ನೆ ಹಾಕಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.