ರಾಜಕೀಯ

ರಾಜ್ಯದಲ್ಲಿ ಮೋದಿ ಮ್ಯಾಜಿಕ್ ನಡೆಯದು: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಬಲ ಪ್ರಚಾರದಿಂದ ಚುನಾವಣೆ ಗೆಲ್ಲಬಹುದು ಎಂದು ಒಂದೆಡೆ ಬಿಜೆಪಿ ನಾಯಕರು ಭರವಸೆಗಳನ್ನು ವ್ಯಕ್ತಪಡಿಸುತ್ತಿದ್ದರೆ, ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಭರವಸೆಗಳನ್ನು ತಿರಸ್ಕರಿಸಿದ್ದಾರೆ...

ರಾಜ್ಯದಲ್ಲಿ ಮೋದಿ ಮ್ಯಾಜಿಕ್ ನಡೆಯದು: ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Published On :
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಬಲ ಪ್ರಚಾರದಿಂದ ಚುನಾವಣೆ ಗೆಲ್ಲಬಹುದು ಎಂದು ಒಂದೆಡೆ ಬಿಜೆಪಿ ನಾಯಕರು ಭರವಸೆಗಳನ್ನು ವ್ಯಕ್ತಪಡಿಸುತ್ತಿದ್ದರೆ, ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಭರವಸೆಗಳನ್ನು ತಿರಸ್ಕರಿಸಿದ್ದಾರೆ. 
ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ಕರ್ನಾಟಕದಲ್ಲಿ ಮೋದಿ ಮ್ಯಾಜಿಕ್ ನಡೆಯುವುದಿಲ್ಲ. ಮೋದಿ, ಶಾ, ಯೋಗಿ ಆದಿತ್ಯನಾಥ್ ಯಾರನ್ನೇ ಕರೆ ತಂದರೂ ಜನರು ಈಗಾಗಲೇ ಕಾಂಗ್ರೆಸ್ ಪಕ್ಷವನ್ನು ಆಯ್ದುಕೊಂಡಿದ್ದು, ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹೇಳಿದ್ದಾರೆ. 
ನಮ್ಮ ಸರ್ಕಾರ ಉತ್ತಮ ಕಾರ್ಯಗಳನ್ನು ಮಾಡುವುದರಿಂದ ರಾಜ್ಯ ಜನತೆ ಈಗಾಗಲೇ ಕಾಂಗ್ರೆಸ್ ಪರವಾಗಿ ನಿಂತಿದ್ದಾರೆ. ಕರ್ನಾಟಕ ಉತ್ತರಪ್ರದೇಶವಲ್ಲ. ಮೋದಿ ಮ್ಯಾಜಿಕ್ ರಾಜ್ಯದಲ್ಲಿ ಕೆಲಸ ಮಾಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಗೆಲವು ಸಾಧಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.