ಮೋದಿ ಆಗಮನಕ್ಕೆ ನಮ್ಮ ವಿರೋಧವಿಲ್ಲ, ವೈಯುಕ್ತಿಕವಾಗಿ ನಮ್ಮ ನಡುವೆ ದ್ವೇಷವಿಲ್ಲ: ಸಿಎಂ ಸಿದ್ದರಾಮಯ್ಯ
ಪ್ರಧಾನಿ ನರೇಂದ್ರ ಮೋದಿ ಅವರ ಕರ್ನಾಟಕಕ್ಕೆ ಆಗಮಿಸುವ ಕುರಿತು ನಮಗೆ ವಿರೋಧವಿಲ್ಲ. ವೈಯುಕ್ತಿಕವಾಗಿ ನಮ್ಮ ನಡುವೆ ಯಾವುಗೇ ದ್ವೇಷವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Published On :
ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರ ಕರ್ನಾಟಕಕ್ಕೆ ಆಗಮಿಸುವ ಕುರಿತು ನಮಗೆ ವಿರೋಧವಿಲ್ಲ. ವೈಯುಕ್ತಿಕವಾಗಿ ನಮ್ಮ ನಡುವೆ ಯಾವುಗೇ ದ್ವೇಷವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಮಂಗಳವಾರದಿಂದ ರಾಜ್ಯದಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರ ಆಗಮನ ಹಿನ್ನಲೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಇದು ಪ್ರಜಾ ಪ್ರಭುತ್ವ. ಪ್ರಧಾನಿ ಮೋದಿ ಅವರೊಂದಿಗೆ ನಮ್ಮ ವೈಯುಕ್ತಿ ದ್ವೇಷವೇನೂ ಇಲ್ಲ, ಅವರು ಕರ್ನಾಟಕಕ್ಕೆ ಆಗಮಿಸುವ ಕುರಿತು ನಮಗೆ ವಿರೋಧವಿಲ್ಲ. ಆದರೆ ಪ್ರಧಾನಿ ಮೋದಿ ಆಗಮಿಸಿದ ಮಾತ್ರಕ್ಕೆ ಕರ್ನಾಟಕದಲ್ಲಿ ಬಿಜೆಪಿ ಭವಿಷ್ಯವೇನೂ ಬದಲಾಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಗೆ ಭ್ರಷ್ಟಾಚಾರದ ಕುರಿತು ಮಾತನಾಡುವ ನೈತಿಕತೆಯೇ ಇಲ್ಲ. ಭ್ರಷ್ಟಾಚಾರದ ವಿರುದ್ಧ ಮಾತನಾಡಿದ್ದ ಬಿಜೆಪಿ, ಲೋಕಪಾಲರನ್ನು ನೇಮಕ ಮಾಡಿತೇ..ಪ್ರಧಾನಿ ಮೋದಿ ಗುಜರಾತ್ ಸಿಎಂ ಆಗಿದ್ದಾಗ ಲೋಕಾಯುಕ್ತರನ್ನೇ ನೇಮಕ ಮಾಡಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PoliticsರಾಜಕೀಯSiddaramaiahಸಿದ್ದರಾಮಯ್ಯVijayapuraPM Modiಪ್ರಧಾನಿ ಮೋದಿವಿಜಯಪುರKarnataka Assembly Electionಕರ್ನಾಟಕ ವಿಧನಾಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


