5 ವರ್ಷದ ಅಧಿಕಾರದಲ್ಲಿ ವಿಪಕ್ಷಗಳನ್ನು ಟೀಕಿಸುವುದು ಬಿಟ್ಟರೆ, ರಾಜ್ಯಕ್ಕೆ ಕಾಂಗ್ರೆಸ್ ಏನೂ ಮಾಡಿಲ್ಲ: ಹೆಚ್.ಡಿ.ಕುಮಾರಸ್ವಾಮಿ
5 ವರ್ಷದ ಅಧಿಕಾರದಲ್ಲಿ ರಾಜ್ಯದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್, ವಿರೋಧ ಪಕ್ಷಗಳನ್ನು ಟೀಕಿಸುವುದು ಬಿಟ್ಟರೆ, ಏನನ್ನೂ ಮಾಡಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ...

Published On :
ಶ್ರೀನಿವಾಸಪುರ; 5 ವರ್ಷದ ಅಧಿಕಾರದಲ್ಲಿ ರಾಜ್ಯದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್, ವಿರೋಧ ಪಕ್ಷಗಳನ್ನು ಟೀಕಿಸುವುದು ಬಿಟ್ಟರೆ, ಏನನ್ನೂ ಮಾಡಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ.
ಶ್ರೀನಿವಾಸಪುರದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿರುವ ಅವರು, ಐದು ವರ್ಷದಲ್ಲಿ ಕಾಂಗ್ರೆಸ್ ರಾಜ್ಯಕ್ಕೆ ಏನನ್ನೂ ಮಾಡಿಲ್ಲ. ಆದರೆ, ರಾಜ್ಯದಲ್ಲಿ ಸಾಕಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ವ್ಯಂಗ್ಯವಾಡಿದ್ದಾರೆ.
ರಾಜ್ಯದಲ್ಲಿ ಹೊತ್ತಿ ಉರಿಯುತ್ತಿರುವ ವಿಚಾರಗಳು ಹಾಗೂ ಮಹಿಳೆಯರ ಭದ್ರತೆ ಸೇರಿದಂತೆ ಇನ್ನಿತರೆ ಸಮಸ್ಯೆಗಳನ್ನು ಇತ್ಯರ್ಥಪಡಿಸಲು, ಬಗೆಹರಿಸಲು ಜೆಡಿಎಸ್ ನಿಂದ ಮಾತ್ರ ಸಾಧ್ಯ. ದೇಶದ ಬೆನ್ನೆಲುಬಾಗಿರುವ ರೈತರನ್ನು ರಕ್ಷಣೆ ಮಾಡುವಲ್ಲಿ ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ ಎಂದು ತಿಳಿಸಿದ್ದಾರೆ.
ಜೆಡಿಎಸ್ ಪಕ್ಷಕ್ಕೆ ಜನರು ಮತ ಹಾಕಿದ್ದೇ ಆದರೆ, ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರೈತರ ಸಾಲಗಳನ್ನು ಮನ್ನಾ ಮಾಡಲಾಗುತ್ತದೆ. ನೀರು ಸಮಸ್ಯೆ ಸೇರಿದಂದೆ ಇನ್ನಿತರೆ ಸಮಸ್ಯೆಗಳನ್ನು ಬಗೆಹರಿಸಲಾಗುತ್ತದೆ. ರಾಜ್ಯದಲ್ಲಿ ಬೆಳೆದ ಮಾವುಗಳನ್ನು ಇತರೆ ರಾಷ್ಟ್ರಗಳಿಗೆ ರಫ್ತು ಮಾಡಲು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ರೈತರ ಪ್ರತೀ ಕಣ್ಣೀರಿನ ಹನಿಯ ಬೆಲೆಯನ್ನು ಸಿದ್ದರಾಮಯ್ಯ ಸರ್ಕಾರಕ್ಕೆ ವಿವರಿಸಲಾಗುತ್ತದೆ. 5 ವರ್ಷಗಳ ಅಧಿಕಾರದಲ್ಲಿ ರಾಜ್ಯಕ್ಕೆ ಏನನ್ನೂ ಮಾಡದೆ, ವಿರೋಧ ಪಕ್ಷಗಳನ್ನು ಟೀಕಿಸಿದ್ದ ಸಿದ್ದರಾಮಯ್ಯ ಅವರಿಗೆ ತಕ್ಕ ಪಾಠವನ್ನು ಹೇಳಿಕೊಡಲಾಗುತ್ತದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್JDSKumaraswamyಕುಮಾರಸ್ವಾಮಿಸಿದ್ದರಾಮಯ್ಯKarnatakaಕರ್ನಾಟಕಜೆಡಿಎಸ್SiddramaiahKarnataka Assembly Electionಕರ್ನಾಟಕ ವಿಧಾನಸಭಾ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


