ಕಾಂಗ್ರೆಸ್ ಪಕ್ಷದಲ್ಲಿನ ಒಡಕಿನಿಂದ ಬಿಜೆಪಿಗೆ ಲಾಭ: ಅನಂತ್ ಕುಮಾರ್
ಕಾಂಗ್ರೆಸ್ ನಲ್ಲಿ ಎರಡು ಗುಂಪುಗಳಿವೆ, ಒಂದು ಕಾಂಗ್ರೆಸ್ ನಾಯಕರದ್ದು ಮತ್ತೊಂದು ವಲಸಿಗ ಕಾಂಗ್ರೆಸ್ ನಾಯಕರದ್ದು. ..

Published On :
ಗದಗ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಒಂದೇ ವಿಮಾನದಲ್ಲಿ ಪ್ರಯಾಣಿಸಿದ್ದಾರೆ ಎನ್ನುವ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಬೀತುಪಡಿಸಲಿ ಎಂದು ಕೇಂದ್ರ ಸಚಿವ ಅನಂತ ಕುಮಾರ್ ಸವಾಲು ಹಾಕಿದ್ದಾರೆ.
ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅನಂತ್ ಕುಮಾರ್ ಕಾಂಗ್ರೆಸ್ ನಲ್ಲಿ ಎರಡು ಗುಂಪುಗಳಿವೆ, ಒಂದು ಕಾಂಗ್ರೆಸ್ ನಾಯಕರದ್ದು ಮತ್ತೊಂದು ವಲಸಿಗ ಕಾಂಗ್ರೆಸ್ ನಾಯಕರದ್ದು. ಪರಮೇಶ್ವರ್ ,ಮಲ್ಲಿಕಾರ್ಜುನಖರ್ಗೆ ಕಾಂಗ್ರೆಸ್ ಗಿಂತ ಸಿದ್ದರಾಮಯ್ಯ ಕಾಂಗ್ರೆಸ್ ವಿಭಿನ್ನವಾಗಿದೆ ಎಂದು ಟೀಕಿಸಿದ್ದಾರೆ.
ಸುರ್ತೂರು ಮತ್ತು ಮುಳಗುಂದದಲ್ಲಿ ರೋಡ್ ಶೋ ನಡೆಸಿದ ಅನಂತ್ ಕುಮಾರ್, ರಾಜ್ಯದಲ್ಲಿ ಐದು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಸಿದ್ದರಾಮಯ್ಯ ರಚನಾತ್ಮಕವಾಗಿ ಚುನಾವಣಾ ಪ್ರಚಾರ ಮಾಡಬೇಕಿತ್ತು. ಆದರೆ, ಹೇಳಿಕೊಳ್ಳಲು ಯಾವುದೇ ಅಭಿವೃದ್ಧಿ ಕಾರ್ಯಗಳಿಲ್ಲ. ಹಾಗಾಗಿ ಸುಳ್ಳು ಫಾರ್ಮುಲಾ ಬಳಸುತ್ತಾ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ದೂರಿದರು,
ಕಳೆದ ಐದು ವರ್ಷಗಳಲ್ಲಿ ಉತ್ತರ ಕರ್ನಾಟಕವನ್ನು ಸಿದ್ದರಾಮಯ್ಯ ಅಭಿವೃದ್ಧಿಯಿಂದ ದೂರ ಇಟ್ಟಿದ್ದಾರೆ.ವಿವಿಧ ಅಭಿವೃದ್ಧಿ ಹಾಗೂ ಭಾಗ್ಯಗಳ ಹೆಸರಲ್ಲಿ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿAnanth kumarಅನಂತ್ ಕುಮಾರ್Karnataka Assembly Electionಕರ್ನಾಟಕ ವಿಧಾನ ಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


