ರೆಡ್ಡಿ ಬಿಜೆಪಿ ವೇದಿಕೆ ಮೇಲೆ ಬಂದರೆ ವಾಟ್ಸ್ ಆಪ್ ಮಾಡಿ: ಮುರಳೀಧರ್ ರಾವ್
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಿಜೆಪಿಯ ಸ್ಟಾರ್ ಪ್ರಚಾರಕ ಅಲ್ಲ, ಅವರೇನಾದರೂ ಬಿಜೆಪಿ ವೇದಿಕೆಯಲ್ಲಿ ಕಾಣಿಸಿಕೊಂಡರೆ ಫೋಟೊ, ವಿಡಿಯೋವನ್ನು ನನಗೆ ವಾಟ್ಸ್ ಆಪ್ ಮಾಡಿ ಎಂದು ರಾಜ್ಯ ಬಿಜೆಪಿ

Published On :
ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬಿಜೆಪಿಯ ಸ್ಟಾರ್ ಪ್ರಚಾರಕ ಅಲ್ಲ, ಅವರೇನಾದರೂ ಬಿಜೆಪಿ ವೇದಿಕೆಯಲ್ಲಿ ಕಾಣಿಸಿಕೊಂಡರೆ ಫೋಟೊ, ವಿಡಿಯೋವನ್ನು ನನಗೆ ವಾಟ್ಸ್ ಆಪ್ ಮಾಡಿ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಸೂಚನೆಯ ಮೇರೆಗೆ ಜನಾರ್ದನ ರೆಡ್ಡಿ ಪಕ್ಷದ ಪರ ಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ಸಿಎಂ ಅಭ್ಯರ್ಥಿ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಜನಾರ್ದನ ರೆಡ್ಡಿ ಬಿಜೆಪಿಯ ಸ್ಟಾರ್ ಪ್ರಚಾರಕ ಅಲ್ಲ ಎಂದು ಹೇಳಿದ್ದಾರೆ.
ಜನಾರ್ದನ ರೆಡ್ದಿ ಆರೋಪಮುಕ್ತರಾಗದೇ ಪಕ್ಷಕ್ಕೆ ಎಂಟ್ರಿ ಇಲ್ಲ, ಕರುಣಾಕರ ರೆಡ್ದಿ ಹಾಗೂ ಸೋಮಶೇಖರ ರೆಡ್ದಿ ಪಕ್ಷದಲ್ಲಿ 20 ವರ್ಷದಿಂದ ಇದ್ದಾರೆ. ಜನಾರ್ದನ ರೆಡ್ದಿಯಿಂದ ಅವರು ಅಸ್ಥಿತ್ವ ಉಳಿಸಿಕೊಂಡಿಲ್ಲ ಹೀಗಾಗಿ ಟಿಕೆಟ್ ನೀಡಲಾಗಿದೆ. ಜನಾರ್ದನ ರೆಡ್ಡಿಯನ್ನು ಮುಂದಿಟ್ಟುಕೊಂಡು ಸೋಮಶೇಖರ ರೆಡ್ಡಿ ಅವರನ್ನು ದೂಷಿಸುವುದು ಅಗತ್ಯವಿಲ್ಲ, ಬಿಎಸ್ ವೈ ಹೇಳಿಕೆ ಅವರ ವ್ಯಕ್ತಿಗತವಾದದ್ದು. ಪಕ್ಷ ಈ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ಒಂದು ವೇಳೆ ರೆಡ್ಡಿ ಬಿಜೆಪಿ ವೇದಿಕೆಯಲ್ಲಿ ಕಾಣಿಸಿಕೊಂಡರೆ ತಮ್ಮ ವಾಟ್ಸ್ ಆಪ್ ಗೆ ಫೋಟೋ ವಿಡಿಯೋಗಳನ್ನು ಕಳಿಸಿ, ಇದಕ್ಕೆ ನಾನು ಹೊಣೆಯಾಗಿರುತ್ತೇನೆ ಎಂದೂ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿMuralidhar Raoಜನಾರ್ದನ ರೆಡ್ಡಿJanardana Reddyಮುರಳಿಧರ್ ರಾವ್Karnataka Assembly Electionರಾಜ್ಯ ವಿಧಾನಸಭಾ ಚುನಾವಣೆ 2018
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


