ರಾಜಕೀಯ

ಕಾಂಗ್ರೆಸ್ ಕರ್ನಾಟಕವನ್ನು ತನ್ನ ಎಟಿಎಂ ಮಾಡಿಕೊಂಡಿದೆ: ಯೋಗಿ ಆದಿತ್ಯನಾಥ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್....

ಕಾಂಗ್ರೆಸ್ ಕರ್ನಾಟಕವನ್ನು ತನ್ನ ಎಟಿಎಂ ಮಾಡಿಕೊಂಡಿದೆ: ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
Published On :
ಶಿರಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಕಾಂಗ್ರೆಸ್ ಜಾತಿ ಮತದ ಹೆಸರಿನಲ್ಲಿ ಸಮಾಜ ವಿಭಜನೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಬಿಜೆಪಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಯೋಗಿ, ಕಾಂಗ್ರೆಸ್ ಕರ್ನಾಟಕವನ್ನು ತನ್ನ ಎಟಿಎಂ ಆಗಿ ಮಾಡಿಕೊಂಡು ರಾಜ್ಯವನ್ನು ಲೂಟಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. 
ಬಿಜೆಪಿ ಅಭಿವೃದ್ಧಿ, ಸುರಕ್ಷತೆ ಮತ್ತು ಉತ್ತಮ ಆಡಳಿತದ ಆಧಾರದ ಮೇಲೆ ಚುನಾವಣೆ ನಡೆಸುತ್ತಿದೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಎಟಿಎಂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಮತ್ತಷ್ಟು ಲೂಟಿ ಹೊಡೆಯುವುದನ್ನು ತಪ್ಪಿಸಲು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲೇ ಬೇಕು ಎಂದು ಕರೆ ನೀಡಿದರು. 
ಜಿಹಾದಿಗಳಿಗೆ ಬೆಂಬಲ, ವ್ಯಾಪಕ ಭ್ರಷ್ಟಾಚಾರ ಹಾಗೂ ಕೃಷಿಕ ಸಮುದಾಯ ನಿರ್ಲಕ್ಷ್ಯ ಮಾಡಿರುವಂಥ ರಾಜ್ಯ ಕಾಂಗ್ರೆಸ್ ಸರ್ಕಾರದ ಅವನತಿ ಸನ್ನಿಹಿತವಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.