ರಾಜಕೀಯ

ಶ್ರೀರಾಮುಲು ವಿರುದ್ಧದ ಪ್ರಚಾರ ಶುದ್ಧ ಸುಳ್ಳು: ಟ್ವಿಟರ್ ನಲ್ಲಿ ನಟ ಸುದೀಪ್ ಸ್ಪಷ್ಟನೆ

ಸಿಎಂ ಸಿದ್ದರಾಮಯ್ಯ ಅವರ ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಪ್ರಚಾರ ನಡೆಸಿದ ನಟ ಕಿಚ್ಚಾ ಸುದೀಪ್ ಬಾದಾಮಿಯಲ್ಲೂ ಕಾಂಗ್ರೆಸ್ ಪರ ಪ್ರಚಾರ ನಡೆಸಲಿದ್ದಾರೆ ಎಂಬ ಮಾತನ್ನು ನಟ ಸುದೀಪ್ ಅಲ್ಲಗಳೆದಿದ್ದಾರೆ.

ಶ್ರೀರಾಮುಲು ವಿರುದ್ಧದ ಪ್ರಚಾರ ಶುದ್ಧ ಸುಳ್ಳು: ಟ್ವಿಟರ್ ನಲ್ಲಿ ನಟ ಸುದೀಪ್ ಸ್ಪಷ್ಟನೆ
ಸಂಗ್ರಹ ಚಿತ್ರ
Published On :
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಪ್ರಚಾರ ನಡೆಸಿದ ನಟ ಕಿಚ್ಚಾ ಸುದೀಪ್ ಬಾದಾಮಿಯಲ್ಲೂ ಕಾಂಗ್ರೆಸ್ ಪರ ಪ್ರಚಾರ ನಡೆಸಲಿದ್ದಾರೆ ಎಂಬ ಮಾತನ್ನು ನಟ ಸುದೀಪ್ ಅಲ್ಲಗಳೆದಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಸ್ಪಷ್ಟನೆ ನೀಡಿರುವ ನಟ ಸುದೀಪ್, ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ವಿರುದ್ಧ ಪ್ರಚಾರ ನಡೆಸುತ್ತೇನೆ ಎನ್ನುವುದು ಶುದ್ಧ ಸುಳ್ಳು ಎಂದು ಹೇಳಿದ್ದಾರೆ.
ಬಾದಾಮಿಯಲ್ಲಿ ಶ್ರೀರಾಮುಲು ಅವರ ವಿರುದ್ಧ ಪ್ರಚಾರ ನಡೆಸುತ್ತೇನೆ ಎಂಬ ಮಾತು ಶುದ್ಧ ಸುಳ್ಳು. 'ಶ್ರೀರಾಮುಲು ಅವರನ್ನು ತುಂಬಾ ವರ್ಷಗಳಿಂದ ಬಲ್ಲೆ. ಸದಾ ಅವರ ಹಿತವನ್ನೇ ಬಯಸುತ್ತೇನೆ' ಎಂದು ಹೇಳಿದ್ದಾರೆ. ಅಂತೆಯೇ ಸುಳ್ಳು ಸುದ್ದಿ ಬಿತ್ತರಿಸಿದ ವಾಹಿನಿಗಳ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿರುವ ಸುದೀಪ್, ಯಾವುದೇ ವಿಚಾರವನ್ನು ಪ್ರಸಾರ ಮಾಡುವ ಮುನ್ನ ಸುದ್ದಿವಾಹಿನಿಗಳ ಆ ವಿಚಾರಕ್ಕೆ ಸಂಬಂಧಿಸಿದಂತೆ ಸಂಬಂಧ ಪಟ್ಟವರಿಂದ ಸ್ಪಷ್ಟನೆ ಪಡೆಯಬೇಕು. ಆ ಮೂಲಕ ಇಂತಹ ಊಹಾ-ಪೋಹಗಳಿಗೆ ತೆರೆ ಎಳೆಯಬೇಕು ಎಂದು ಮನವಿ ಮಾಡಿದ್ದಾರೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ, ಸುರಪುರದ ಹೆಲಿಪ್ಯಾಡ್​ ನಲ್ಲಿ ಮಾತನಾಡಿ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರಕ್ಕೆ ಕರೆದಿದ್ದಾರೆ. ಆ ಕುರಿತು ನಾನು ಇನ್ನು ಯಾವುದೇ ನಿರ್ಧಾರ ಮಾಡಿಲ್ಲ. ಇಂದಿನ ಚುನಾವಣೆ ಪ್ರಚಾರದಲ್ಲಿ ನನ್ನ ಸಹೋದರ ರಾಜುಗೌಡ ಪರ ಪ್ರಚಾರ ಮಾಡಲು ಬಂದಿದ್ದೇನೆ. ನಾನು ಇಲ್ಲಿಗೆ ಬಂದಿರುವುದು ವೈಯಕ್ತಿಕವಾಗಿ. ರಾಜುಗೌಡ ಗೆಲ್ಲುತ್ತಾರೆ ಎಂದರು.
ಇನ್ನು ಹಾಲಿ ಚುನಾವಣೆಯಲ್ಲಿ  ಹೈವೋಲ್ಟೇಜ್ ಕ್ಷೇತ್ರವಾಗಿ ಮಾರ್ಪಟ್ಟಿರುವ ಬಾದಾಮಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ನಟ ಸುದೀಪ್ ಪ್ರಚಾರ ಮಾಡುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ ಜಾಲತಾಣಗಳಲ್ಲಿ ಸುದೀಪ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಬಾದಾಮಿಯಲ್ಲಿ ಸಿಎಂ ವಿರುದ್ಧ ಸ್ಪರ್ಧಿಸಿರುವ ಶ್ರೀರಾಮುಲು ವಾಲ್ಮೀಕಿ ಸಮುದಾಯಕ್ಕೆ ಸೇರಿದವರಾಗಿದ್ದು, ಅದೇ ಸಮುದಾಯಕ್ಕೆ ಸೇರಿದವರಾದ ಸುದೀಪ್ ಅವರು ಸಿದ್ದರಾಮಯ್ಯ ಪರ ಪ್ರಜಾರ ಮಾಡಿದರೆ, ಸಮುದಾಯಕ್ಕೆ ಮೋಸ ಮಾಡಿದಂತಾಗುತ್ತದೆ ಎಂದು ವಾಲ್ಮೀಕಿ ಸಮುದಾಯದ ಯುವಕರು 'ಗೋ ಬ್ಯಾಕ್ ಸುದೀಪ್' ಅಂತಾ ಜಾಲತಾಣಗಳಲ್ಲಿ ಅಭಿಯಾನ ಕೈಗೊಂಡಿದ್ದರು. 
ಇನ್ನು ಈ ಹಿಂದೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು, ಸುದೀಪ್ ನಮ್ಮ ಸಮುದಾಯವರಾಗಿದ್ದಾರೆ. ಅಲ್ಲದೆ ನನನ್ನು ಹತ್ತಿರದಿಂದ ಬಲ್ಲವರಾಗಿದ್ದು, ಬಾದಾಮಿ ಕ್ಷೇತ್ರದಲ್ಲಿ ನನ್ನ ಪರ ಪ್ರಚಾರ ಮಾಡಲಿ ಎಂದು ಹೇಳಿದ್ದರು.
Story image

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.