ಗದಗದಲ್ಲಿ ಮಹದಾಯಿ ದಾಳ ಉರುಳಿಸಿದ ಮೋದಿ, ಮಾತುಕತೆ ಮೂಲಕ ಪರಿಹಾರಕ್ಕೆ ಬದ್ಧ ಎಂದ ಪ್ರಧಾನಿ
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಗದಗದಲ್ಲಿ ಮಹದಾಯಿ ದಾಳ ಉರುಳಿಸಿದ್ದು, ಪರಸ್ಪರ ಮಾತುಕತೆ ಮೂಲಕ....

Published On :
ಗದಗ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಗದಗದಲ್ಲಿ ಮಹದಾಯಿ ದಾಳ ಉರುಳಿಸಿದ್ದು, ಪರಸ್ಪರ ಮಾತುಕತೆ ಮೂಲಕ ವಿವಾದ ಪರಿಹರಿಸಿಕೊಳ್ಳಲು ತಾವು ಬದ್ಧ ಎಂದು ಹೇಳಿದ್ದಾರೆ.
ಇಂದು ಗದಗಿನ ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಬಿಜೆಪಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಮೋದಿ, ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.
ಮಹದಾಯಿ ವಿಷಯದಲ್ಲಿ ಕಾಂಗ್ರೆಸ್ ಮಾಡುತ್ತಿರುವ ಗೊಂದಲವನ್ನು ಎಳೆ ಎಳೆಯಾಗಿ ನಿಮ್ಮ ಮುಂದೆ ಬಿಚ್ಚಿಡುತ್ತೇನೆ. ಗೋವಾದಲ್ಲಿ ಸೋನಿಯಾ ಗಾಂಧಿಯವರು 2007 ರಲ್ಲಿ ಯಾವುದೇ ಕಾರಣಕ್ಕೂ ಮಹದಾಯಿ ನೀರಿನ ಒಂದು ಹನಿಯನ್ನೂ ಕೂಡ ಕರ್ನಾಟಕಕ್ಕೆ ಹರಿಸುವದಿಲ್ಲ ಎಂಬ ಮಾತು ಮರೆತುಹೋಯಿತೇ ಮುಖ್ಯಮಂತ್ರಿಗಳೇ? ಎಂದು ಪ್ರಧಾನಿ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.
ಗೋವಾದಲ್ಲಿ ಚುನಾವಣೆ ಸೋತ ನಂತರ, ಕಾಂಗ್ರೆಸ್ ಮಹದಾಯಿ ವಿಷಯದಲ್ಲಿ ಕರ್ನಾಟಕದ ಜನತೆಯ ಮುಂದೆ ನಾಟಕವಾಡುತ್ತಿದೆ. ಆದ ಕಾರಣ ಇಲ್ಲೂ ಕೂಡ ಕಾಂಗ್ರೆಸ್ ಸೋತು ಹೋಗಲಿದೆ. ಮಹದಾಯಿ ವಿಚಾರವನ್ನು ನಾವು ಮಾತುಕತೆ ಮುಖಾಂತರ ಪರಿಹರಿಸಲು ಬದ್ಧರಾಗಿದ್ದೇವೆ ಎಂದರು.
ರಾಜ್ಯದ ಸಮೃದ್ಧ ಕೆರೆಗಳು ನೀರಿಲ್ಲದ್ದೆ ಬರಿದಾಗಿವೆ. ನೀರು ನೀರು ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಕೆರೆಗಳ ಪುನಶ್ಚೇತನಕ್ಕೆ ಕಾಂಗ್ರೆಸ್ ಸರ್ಕಾರ ಕ್ರಮ ಕೈಗೊಳ್ಳಲಿಲ್ಲ. ಕೆರೆಗಳು ಬರಿದಾಗಿ ಒಣಗುವುದನ್ನೇ ಕಾಯುತ್ತಿದ್ದಾರೆ. ಬಿಲ್ಡರ್ ಗಳಿಗೆ ಮಾರಾಟ ಮಾಡಲು ಹೊರಟ್ಟಿದ್ದಾರೆ. ಕಾಂಗ್ರೆಸ್ ಸುಳ್ಳು ಹೇಳು ಹೇಳಿ, ಜನರ ಕಣ್ಣಿಗೆ ಮಣ್ಣೆರಚುವುದರಲ್ಲಿ ನಿಸ್ಸೀಮರು. ಕಾಂಗ್ರೆಸ್ ಅಧಿಕಾರಕ್ಕಾಗಿ ಜನರನ್ನು ಮರುಳು ಮಾಡುತ್ತಿದೆ ಎಂದು ಪ್ರಧಾನಿ ಆರೋಪಿಸಿದರು.
ಮುಖ್ಯಮಂತ್ರಿಗಳೇ, ಇಲ್ಲಿನ ರೈತರನ್ನು ಹಾದಿತಪ್ಪಿಸುವ ಬದಲು ಮಹದಾಯಿ ವಿಚಾರವಾಗಿ ನಿಮ್ಮ ನಿಲುವೇನು ಎಂಬುದನ್ನು ಸೋನಿಯಾ ಗಾಂಧಿಯವರ ಜತೆ ಮಾತನಾಡಿ ಸ್ಪಷ್ಟಪಡಿಸಿ. ಕರ್ನಾಟಕದ ರೈತರ, ಯುವಕರ ಹಾದಿತಪ್ಪಿಸಬೇಡಿ ಎಂದು ಮೋದಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


