ರಾಜಕೀಯ

ಕಾಂಗ್ರೆಸ್ ಸೋಲಿಸಲು ಒಕ್ಕಲಿಗ ಸಮುದಾಯ ಒಗ್ಗೂಡಿದೆ ಎಂಬ ಆರೋಪ ಸತ್ಯಕ್ಕೆ ದೂರ: ಡಿಕೆ ಶಿವಕುಮಾರ್

ಮೇ 12 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಇಡೀ ಒಕ್ಕಲಿಗ ಸಮುದಾಯ ಒಗ್ಗಟ್ಟಾಗಿ ತಂತ್ರ ರೂಪಿಸುತ್ತಿದೆ ...

ಕಾಂಗ್ರೆಸ್ ಸೋಲಿಸಲು ಒಕ್ಕಲಿಗ ಸಮುದಾಯ ಒಗ್ಗೂಡಿದೆ ಎಂಬ ಆರೋಪ ಸತ್ಯಕ್ಕೆ ದೂರ: ಡಿಕೆ ಶಿವಕುಮಾರ್
ಡಿ.ಕೆ ಶಿವಕುಮಾರ್
Published On :
ಬೆಂಗಳೂರು: ಮೇ 12 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಇಡೀ ಒಕ್ಕಲಿಗ ಸಮುದಾಯ ಒಗ್ಗಟ್ಟಾಗಿ ತಂತ್ರ ರೂಪಿಸುತ್ತಿದೆ ಎಂಬ ಆರೋಪವನ್ನು ಇಂಧನ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಳ್ಳಿ ಹಾಕಿದ್ದಾರೆ.
ಒಕ್ಕಲಿಗ ಸಮುದಾಯದ ಪ್ರಬಲ ನಾಯಕರಾಗಿರುವ ಡಿಕೆ ಶಿವಕುಮಾರ್, ಕಾಂಗ್ರೆಸ್ ವಿರುದ್ಧ ಒಕ್ಕಲಿಗ ಸಮುದಾಯ ಮತ ಚಲಾಯಿಸಲು ಯಾವುದೇ ಕಾರಣವಿಲ್ಲ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಾಜದ ಎಲ್ಲಾ ವರ್ಗಗಳ ಜನರಿಗೂ ಉಪಯೋಗವಾಗುವಂತ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೆ ತಂದಿದ್ದಾರೆ ಎಂದು ಹೇಳಿದ್ದಾರೆ.
ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ಮಂಡ್ಯ, ಹಾಸನ ಚಿಕ್ಕಮಗಳೂರು ಗಳಲ್ಲಿ ನಾನು ಇದನ್ನು ಪರಿಶೀಲಿಸಿದ್ದೇನೆ, ಅಲ್ಲೆಲ್ಲೂ ಒಕ್ಕಲಿಗರ ಕ್ರೂಢೀಕರಣವಾಗಿಲ್ಲ, ಎತ್ತಿನಹೊಳೆ ಯೋಜನೆಯನ್ನು ಅನುಷ್ಠಾನಕ್ಕೆ ತರಬೇಕೆಂದು ಕಾಂಗ್ರೆಸ್  ಪ್ರಯತ್ನಿಸುತ್ತಿದೆ, ಈ ಯೋಜನೆಯಿಂದ ಹೆಚ್ಚು ಪ್ರಮಾಣದಲ್ಲಿ ಅನುಕೂಲವಾಗುವುದು ಒಕ್ಕಲಿಗರು ಹೆಚ್ಚಾಗಿರುವ ಪ್ರದೇಶಕ್ಕೆ. ಸಹಾಯವಾಗಲಿದೆ, ಅದರೆ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರ ಸ್ವಾಮಿ, ಅಧಿಕಾರಕ್ಕೆ ಬಂದರೇ ಯೋಜನೆಯನ್ನು ಕೈ ಬಿಡುವುದಾಗಿ ಘೋಷಿಸಿದ್ದಾರೆ ಎಂದು ಶಿವಕುಮಾರ್ ಆರೋಪಿಸಿದ್ದಾರೆ. 
ಎಸ್ ಎಂ ಕೃಷ್ಣ  ಅವರ ಅವಧಿಗಿಂತ ಕಾಂಗ್ರೆಸ್  ಹೆಚ್ಚಿನ ಪ್ರಮಾಣದಲ್ಲಿ  ಈ ಬಾರಿ ಒಕ್ಕಲಿಗ ನಾಯಕರುಗಳನ್ನು ಚುನಾವಣಾ ಕಣಕ್ಕಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.