ರಾಜಕೀಯ

ಇವಿಎಂಗೆ ಹೊಸ ಅರ್ಥ ಕೊಟ್ಟ ಪ್ರಧಾನಿ ಮೋದಿ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು...

ಇವಿಎಂಗೆ ಹೊಸ ಅರ್ಥ ಕೊಟ್ಟ ಪ್ರಧಾನಿ ಮೋದಿ
ನರೇಂದ್ರ ಮೋದಿ
Published On :
ಮಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. 
ಮಂಗಳೂರಿನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ ಅವರು, ದೇಶದಲ್ಲಿನ ಹಲವು ರಾಜ್ಯಗಳಲ್ಲಿ ಸೋಲು ಕಾಣುವ ಮೂಲಕ ತಮ್ಮ ಹಿಡಿತವನ್ನು  ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ಇದಕ್ಕೆ ಇವಿಎಂ ಅನ್ನು ಆರೋಪಿಸುತ್ತಿದೆ. 
ಇವಿಎಂಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಅರ್ಥವನ್ನು ಕೊಟ್ಟಿದ್ದಾರೆ. ಇ-ಜನತಾ ಜನಾರ್ದನನ ಎನರ್ಜಿ, ವಿ-ಜನರ ಚುನಾವಣಾ ಮೌಲ್ಯ ಸೇರ್ಪಡೆ, ಎಂ-ಪ್ರಗತಿಗಾಗಿ ಜನರ ಪ್ರೇರಣೆಗೆ ನಿಂತಿದೆ. ಇದು ಇವಿಎಂ ಅಂದರೆ, ನಾವು ಈ ಇವಿಎಂ ಅನ್ನು ನೋಡುತ್ತೇನೆ ಎಂದು ಹೇಳಿದ್ದಾರೆ. 
ಬಿಜೆಪಿ ಗೆದ್ದಾಗಲೆಲ್ಲ ಇವಿಎಂಗಳನ್ನು ತಿರುಚಲಾಗಿದೆ ಎಂದು ಕಾಂಗ್ರೆಸ್‌ ಆರೋಪಿಸುತ್ತದೆ. ಮೇ 15ರಂದು ನೀವು ಮತ್ತೊಮ್ಮೆ ಈ ಆರೋಪವನ್ನು ಕೇಳಲಿದ್ದೀರಿ ಎಂದು ಟಾಂಗ್ ನೀಡಿದರು.
ಕಾಂಗ್ರೆಸ್‌ ತನ್ನ ದುರಹಂಕಾರದಿಂದಲೇ ಎಲ್ಲ ರಾಜ್ಯಗಳನ್ನು ಕಳೆದುಕೊಂಡಿದೆ. ಅಂತಹ ನಡವಳಿಕೆಗಳನ್ನು ಜನ ಒಪ್ಪುವುದಿಲ್ಲ. ಕಾಂಗ್ರೆಸ್‌ ಅನ್ನು ಕರ್ನಾಟಕದ ಜನತೆ ತಿರಸ್ಕರಿಸುವುದು ನಿಶ್ಚಿತ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.