ಮುಧೋಳ ನಾಯಿಗೆ ಇರುವಷ್ಟು ದೇಶಭಕ್ತಿ ಕಾಂಗ್ರೆಸ್ ಗೆ ಇಲ್ಲ: ಮೋದಿ
ರಾಜ್ಯ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಮೇ.06 ರಂದು ಜಮಖಂಡಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಕಟು ಶಬ್ದಗಳಲ್ಲಿ ಟೀಕಾ ಪ್ರಹಾರ ನಡೆಸಿದ್ದಾರೆ.

Published On :
ಜಮಖಂಡಿ: ರಾಜ್ಯ ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಮೇ.06 ರಂದು ಜಮಖಂಡಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಕಟು ಶಬ್ದಗಳಲ್ಲಿ ಟೀಕಾ ಪ್ರಹಾರ ನಡೆಸಿದ್ದಾರೆ.
ಕಾಂಗ್ರೆಸ್ ನ ದೇಶಭಕ್ತಿಯನ್ನು ಪ್ರಶ್ನಿಸಿರುವ ಪ್ರಧಾನಿ ಮೋದಿ, ಮುಧೋಳ ನಾಯಿಗೆ ಇರುವಷ್ಟೂ ದೇಶಭಕ್ತಿ ಕಾಂಗ್ರೆಸ್ ಗೆ ಇಲ್ಲ, ಕಾಂಗ್ರೆಸ್ ನವರು ಮುಧೋಳ ನಾಯಿಯಿಂದಾರೂ ದೇಶ ಭಕ್ತಿ ಕಲಿಯಬೇಕಿದೆ ಎಂದು ಹೇಳಿದ್ದಾರೆ.
ದೇಶವನ್ನು ಚೂರು ಚೂರು ಮಾಡುತ್ತೇವೆ ಎಂಬ ಘೋಷಣೆ ಕೂಗುವವರಿಗೆ ಕಾಂಗ್ರೆಸ್ ನಾಯಕ ಬೆಂಬಲ ನೀಡುತ್ತಾರೆ ಎಂದು ಸ್ಪಷ್ಟವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೇಶಭಕ್ತಿ, ರಾಷ್ಟ್ರಭಕ್ತಿ, ವಂದೇ ಮಾತರಮ್, ರಾಷ್ಟ್ರಗೀತೆ ಬಗ್ಗೆ ಚರ್ಚೆ ನಡೆದಾಗಲೆಲ್ಲಾ ಕೆಲವರು ಚಿಂತೆಗೀಡಾಗುತ್ತಾರೆ. ಆದರೆ ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದೂ ರಾಷ್ಟ್ರಭಕ್ತಿಯಿಂದಲೇ ಇಂದಿಗೂ ನಾವು ಅಭಿವೃದ್ಧಿಯ ಅಭಿಯಾನ ನಡೆಸುತ್ತಿರುವುದು ದೇಶಭಕ್ತಿಯಿಂದಲೇ ಆದರೆ ಕಾಂಗ್ರೆಸ್ ಗೆ ದೇಶಭಕ್ತಿ ಎಂದರೆ ಆರೋಗ್ಯ ಕೆಡುತ್ತದೆ, ಕಾಂಗ್ರೆಸ್ ಪಕ್ಷ ಕನಿಷ್ಠ ಮುಧೋಳ ನಾಯಿಯಿಂದಾರೂ ದೇಶ ಭಕ್ತಿ ಕಲಿಯಬೇಕಿದೆ ಎಂದು ಸಲಹೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Modiರಾಷ್ಟ್ರಭಕ್ತಿಮೋದಿpatriotismಮುಧೋಳ ನಾಯಿKarnataka Assembly Electionಕರ್ನಾಟಕ ವಿಧಾನಸಭಾ ಚುನಾವಣೆMudhol hound dogs
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


