ಮೋದಿ ಮುಖ ಟ್ಯಾಟೋ ಮೂಲಕ ಬೆಂಬಲ ವ್ಯಕ್ತಪಡಿಸಿದ ಯುವಕ
ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಇಲ್ಲಿನ ಯುವಕನೋರ್ವ ತನ್ನ ಬೆನ್ನ ಹಿಂದೆ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಮುಖದ ಹೋಲಿಕೆಯಿರುವ ಟ್ಯಾಟೋ ಬಿಡಿಸಿಕೊಳ್ಳುವ ಮೂಲಕ ಬಿಜೆಪಿ ಹಾಗೂ ನರೇಂದ್ರಮೋದಿಗೆ ಬೆಂಬಲ ವ್ಯಕ್ತಪಡಿಸಿದ್ದಾನೆ.

ರಾಯಚೂರು : ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಇಲ್ಲಿನ ಯುವಕನೋರ್ವ ತನ್ನ ಬೆನ್ನ ಹಿಂದೆ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಮುಖದ ಹೋಲಿಕೆಯಿರುವ ಟ್ಯಾಟೋ ಬಿಡಿಸಿಕೊಳ್ಳುವ ಮೂಲಕ ಬಿಜೆಪಿ ಹಾಗೂ ನರೇಂದ್ರಮೋದಿಗೆ ಬೆಂಬಲ ವ್ಯಕ್ತಪಡಿಸಿದ್ದಾನೆ.
ಪ್ರಧಾನಿ ನರೇಂದ್ರಮೋದಿ ಅವರ ನಾಲ್ಕು ವರ್ಷಗಳ ಆಡಳಿತದಿಂದ ಆಕರ್ಷಿತಗೊಂಡು ಈ ರೀತಿಯ ಟ್ಯಾಟೋ ಬಿಡಿಸಿಕೊಂಡಿರುವುದಾಗಿ ಬಸವರಾಜ್ ಹೇಳಿದ್ದಾರೆ.
ವೃತ್ತಿಯಲ್ಲಿ ಖಾಸಗಿ ಸಂಸ್ಥೆಯೊಂದರಲ್ಲಿ ಬೋಧಕರಾಗಿರುವ ಬಸವರಾಜ್, ನರೇಂದ್ರಮೋದಿ ಉತ್ತಮ ಕೆಲಸ ಮಾಡಿರುವ ಹಿನ್ನೆಲೆಯಲ್ಲಿ ಅವರ ಟ್ಯಾಟೋ ಬಿಡಿಸಿಕೊಂಡಿದ್ದು, ಇದನ್ನು ಬಿಡಿಸಿಕೊಳ್ಳಲು 15 ಗಂಟೆ ಬೇಕಾಯಿತು ಎಂದು ತಿಳಿಸಿದ್ದಾರೆ.
ಇಂದು ನಡೆದ ಚುನಾವಣೆ ಸಂದರ್ಭದಲ್ಲಿ ನರೇಂದ್ರಮೋದಿ ಅವರು ಬಸವರಾಜ್ ಹೆಸರನ್ನು ಕರೆದು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸುವಂತೆ ಕೋರಿದ್ದಾರೆ. ಇದು ನನ್ನ ಜೀವನದಲ್ಲಿ ಮರೆಯಲಾಗದ ದಿನವಾಗಿದ್ದು, ಬಿಜೆಪಿ ಗೆಲುವುಗಾಗಿ ಸಹಾಯ ಮಾಡುವುದಾಗಿ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


